ಬೆಳ್ಳುಳ್ಳಿಯ 2 ಎಸಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವ ಬಗ್ಗೆ ಕೇಳಿರಬೇಕು, ಆದರೆ ಬೆಳ್ಳುಳ್ಳಿಯನ್ನು ತಿನ್ನುವುದರ ಜೊತೆಗೆ ಕುಡಿಯುವ ನೀರಿನ ಪ್ರಯೋಜನಗಳು ಇನ್ನೂ ಹೆಚ್ಚು. ಬೆಳ್ಳುಳ್ಳಿ ತುಂಬಾ ಆರೋಗ್ಯಕರ ಮೂಲಿಕೆ. ರೋಗಗಳಿಂದ ದೂರವಿರಲು ಬಯಸಿದರೆ, ಬೆಳಿಗ್ಗೆ 2 ಬೆಳ್ಳುಳ್ಳಿ ಎಸಳನ್ನು ಒಂದು ಲೋಟ ನೀರಿನೊಂದಿಗೆ ತಿನ್ನಲು ಪ್ರಾರಂಭಿಸಿ.
ಬೆಳ್ಳುಳ್ಳಿಯನ್ನು ಸದಾ ನೀರಿನ ಜೊತೆ ಕುಡಿಯಬಹುದು. ಉಗುರು ಬಿಸಿ ನೀರೇ ಆಗಬೇಕು ಎಂದೇನಿಲ್ಲ. ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಲು ಬೆಳ್ಳುಳ್ಳಿ ಸೇವಿಸಬಹುದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರಿನೊಂದಿಗೆ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಏನು ಪ್ರಯೋಜನ ತಿಳಿಯೋಣ.
Ginger Benefit: ಕ್ಯಾನ್ಸರ್’ನಂತಹ ಹೆಮ್ಮಾರಿಯನ್ನೂ ಹೊಡೆದೋಡಿಸುವ ಶಕ್ತಿ ಇದರಲ್ಲಿದೆ!
ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ: ಬೆಳ್ಳುಳ್ಳಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.
ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ:ಬೆಳ್ಳುಳ್ಳಿಯಲ್ಲಿರುವ ಅಲಿಸಿನ್ ಎಂಬ ಸಂಯುಕ್ತವು ರಕ್ತನಾಳಗಳನ್ನು ಹಿಗ್ಗಿಸುತ್ತದೆ. ಇದರಿಂದ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
ರಕ್ತದ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ: ಬೆಳ್ಳುಳ್ಳಿ ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ: ಬೆಳ್ಳುಳ್ಳಿ ಜೀರ್ಣಕಾರಿ ರಸದ ಸ್ರವಿಸುವಿಕೆಯನ್ನು ಹೆಚ್ಚಿಸುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಅಜೀರ್ಣ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ.
ಕ್ಯಾನ್ಸರ್ ತಡೆಗಟ್ಟುತ್ತದೆ: ಬೆಳ್ಳುಳ್ಳಿಯಲ್ಲಿರುವ ಆಂಟಿಆಕ್ಸಿಡೆಂಟ್ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ.
ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ: ಬೆಳ್ಳುಳ್ಳಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಸುಕ್ಕುಗಳು ಮತ್ತು ಕಲೆಗಳಂತಹ ಸಮಸ್ಯೆಗಳಿಂದ ರಕ್ಷಿಸುತ್ತದೆ.