IPL ಸೀಸನ್ 17 ಬಹಳಷ್ಟು ಕುತೂಹಲ ಕೆರಳಿಸಿದೆ. ಮುಕ್ಕಾಲು ಭಾಗದಷ್ಟು ಹೀಗಾಗಲೇ ಪಂದ್ಯ ಮುಗಿದಿದ್ದು, ಎಲ್ಲಾ ತಂಡಗಳು ಸಾಕಷ್ಟು ಹೋರಾಟ ಕೊಡುತ್ತಿವೆ.
Bengaluru Weather: ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಯಲ್ಲಿ ಮಳೆ ನಿರೀಕ್ಷೆ..!
ಪ್ರಸ್ತುತ ಸನ್ನಿವೇಶದಲ್ಲಿ ಬಹುತೇಕ ತಂಡಗಳಿಗೆ ಪ್ಲೇಆಫ್ ಪ್ರವೇಶಿಸಲು ಅವಕಾಶವಿದೆ. ಅದರಂತೆ ಯಾವ ತಂಡ ಎಷ್ಟು ಪಂದ್ಯ ಗೆದ್ದರೆ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ
1- ಕೊಲ್ಕತ್ತಾ ನೈಟ್ ರೈಡರ್ಸ್: ಪ್ರಸ್ತುತ ಪಾಯಿಂಟ್ಸ್ ಟೇಬಲ್ನಲ್ಲಿ ಕೆಕೆಆರ್ ತಂಡ ಅಗ್ರಸ್ಥಾನದಲ್ಲಿದೆ. ಈವರೆಗೆ ಆಡಿರುವ 11 ಪಂದ್ಯಗಳಲ್ಲಿ 8 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿವೆ. ಈ ಮೂರು ಮ್ಯಾಚ್ಗಳಲ್ಲಿ 2 ಜಯ ಸಾಧಿಸಿದರೆ ಕೆಕೆಆರ್ ಪಡೆ ಅಧಿಕೃತವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ.
ರಾಜಸ್ಥಾನ್ ರಾಯಲ್ಸ್: ಆರ್ಆರ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದೆ. ಈ ವೇಳೆ 8 ಜಯ ಸಾಧಿಸಿರುವ ರಾಜಸ್ಥಾನ್ ರಾಯಲ್ಸ್ 16 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಮುಂದಿನ 4 ಪಂದ್ಯಗಳಲ್ಲಿ 2 ಜಯ ಸಾಧಿಸಿದರೆ ಅಧಿಕೃತವಾಗಿ ಪ್ಲೇಆಫ್ಗೆ ಪ್ರವೇಶಿಸಲಿದೆ
ಚೆನ್ನೈ ಸೂಪರ್ ಕಿಂಗ್ಸ್: 11 ಪಂದ್ಯಗಳಲ್ಲಿ 6 ಜಯ ಸಾಧಿಸಿರುವ ಸಿಎಸ್ಕೆ ತಂಡವು 12 ಪಾಯಿಂಟ್ಸ್ನೊಂದಿಗೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮುಂದಿನ 3 ಪಂದ್ಯಗಳಲ್ಲೂ ಜಯ ಸಾಧಿಸಿದರೆ ಮಾತ್ರ ಚೆನ್ನೈ ಸೂಪರ್ ಕಿಂಗ್ಸ್ ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸಲಿದೆ.
ಸನ್ರೈಸರ್ಸ್ ಹೈದರಾಬಾದ್: ಎಸ್ಆರ್ಹೆಚ್ ತಂಡವು ಇದುವರೆಗೆ 10 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್ಗಳಲ್ಲಿ ಗೆಲುವು ಸಾಧಿಸಿದೆ. ಇನ್ನು 4 ಪಂದ್ಯಗಳನ್ನು ಹೊಂದಿರುವ ಸನ್ರೈಸರ್ಸ್ ಹೈದರಾಬಾದ್ ತಂಡವು ಎಲ್ಲಾ ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ ಅಧಿಕೃತವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ.
ಲಕ್ನೋ ಸೂಪರ್ ಜೈಂಟ್ಸ್: 11 ಮ್ಯಾಚ್ಗಳಲ್ಲಿ 6 ಗೆಲುವು ದಾಖಲಿಸಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಒಟ್ಟು 12 ಅಂಕಗಳನ್ನು ಹೊಂದಿದೆ. ಇನ್ನುಳಿದಿರುವ ಮೂರು ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ ಮಾತ್ರ ನೇರವಾಗಿ ಪ್ಲೇಆಫ್ ಪ್ರವೇಶಿಸಬಹುದು
ಡೆಲ್ಲಿ ಕ್ಯಾಪಿಟಲ್ಸ್: 11 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು 10 ಪಾಯಿಂಟ್ಸ್ನೊಂದಿಗೆ ಅಂಕ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಇನ್ನುಳಿದಿರುವ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಮಾತ್ರ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಪ್ಲೇಆಫ್ ಪ್ರವೇಶಿಸಲು ಅವಕಾಶ ಇರಲಿದೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್ಸಿಬಿ ತಂಡವು ಈವರೆಗೆ 11 ಪಂದ್ಯಗಳನ್ನಾಡಿದ್ದು, ಈ ವೇಳೆ 4 ಜಯ ಸಾಧಿಸಿ ಒಟ್ಟು 8 ಅಂಕಗಳನ್ನು ಕಲೆಹಾಕಿದೆ. ಇದೀಗ ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಬೇಕಿದ್ದರೆ ಉಳಿದ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕು. ಅಂದರೆ ಮುಂದಿನ 3 ಪಂದ್ಯಗಳಲ್ಲೂ ಆರ್ಸಿಬಿ ಜಯ ಸಾಧಿಸಬೇಕು. ಅಲ್ಲದೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸುವ ಟೀಮ್ 14 ಅಂಕಗಳನ್ಹು ಹೊಂದಿದ್ದರೆ ಮಾತ್ರ ಉತ್ತಮ ನೆಟ್ ರನ್ ರೇಟ್ನೊಂದಿಗೆ ಆರ್ಸಿಬಿಗೆ ಪ್ಲೇಆಫ್ ಪ್ರವೇಶಿಸಲು ಅವಕಾಶ ಇರಲಿದೆ.
ಪಂಜಾಬ್ ಕಿಂಗ್ಸ್: 11 ಪಂದ್ಯಗಳಲ್ಲಿ 4 ಜಯ ಸಾಧಿಸಿರುವ ಪಂಜಾಬ್ ಕಿಂಗ್ಸ್ ತಂಡವು 8 ಪಾಯಿಂಟ್ಸ್ನೊಂದಿಗೆ ಅಂಕ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡ 14 ಅಂಕಗಳೊಂದಿಗೆ ಲೀಗ್ ಹಂತ ಮುಗಿಸಿದರೆ, ಉತ್ತಮ ನೆಟ್ ರನ್ ರೇಟ್ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಪಂಜಾಬ್ ಕಿಂಗ್ಸ್ ತಂಡಕ್ಕೆ ಸಿಗಲಿದೆ.
ಗುಜರಾತ್ ಟೈಟಾನ್ಸ್: 11 ಮ್ಯಾಚ್ಗಳಲ್ಲಿ 4 ಗೆಲುವು, 7 ಸೋಲುಗಳೊಂದಿಗೆ 9ನೇ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ಪ್ಲೇಆಫ್ ಪ್ರವೇಶಿಸಬೇಕಿದ್ದರೆ ಮುಂದಿನ ಎಲ್ಲಾ ಪಂದ್ಯಗಳನ್ನು ಉತ್ತಮ ನೆಟ್ ರನ್ ರೇಟ್ನೊಂದಿಗೆ ಗೆಲ್ಲಬೇಕು. ಅಲ್ಲದೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸುವ ಟೀಮ್ 14 ಅಂಕಗಳನ್ನು ಹೊಂದಿದ್ದರೆ ಮಾತ್ರ ನೆಟ್ ರನ್ ರೇಟ್ ನೆರವಿನಿಂದ ಪ್ಲೇಆಫ್ ಪ್ರವೇಶಿಸಲು ಅವಕಾಶ ಇರಲಿದೆ.
ಮುಂಬೈ ಇಂಡಿಯನ್ಸ್: ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ 11 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 3 ಮ್ಯಾಚ್ ಮಾತ್ರ. ಇನ್ನು ಮೂರು ಪಂದ್ಯಗಳಲ್ಲಿ ಗೆದ್ದರೂ ಮುಂಬೈ ಇಂಡಿಯನ್ಸ್ ತಂಡದ ಒಟ್ಟು ಪಾಯಿಂಟ್ಸ್ 12 ಆಗಲಿದೆ. ಈಗಾಗಲೇ ಅಂಕ ಪಟ್ಟಿಯಲ್ಲಿರುವ ರಾಜಸ್ಥಾನ್ ರಾಯಲ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು 16 ಅಂಕಗಳನ್ನು ಕಲೆಹಾಕಿದೆ. ಇನ್ನುಳಿದಿರುವ 2 ತಂಡಗಳು 14 ಪಾಯಿಂಟ್ಸ್ ಪಡೆದರೆ ಮುಂಬೈ ಇಂಡಿಯನ್ಸ್ ಅಧಿಕೃತವಾಗಿ ಹೊರಬೀಳಲಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ತಂಡ ಪ್ಲೇಆಫ್ ಕನಸು ಬಹುತೇಕ ಕಮರಿದೆ ಎಂದೇ ಹೇಳಬಹುದು.
ಮುಂದಿನ ಪಂದ್ಯಗಳಲ್ಲಿ ಪ್ಲೇಆಫ್ ಪ್ರವೇಶಿಸಲು ಬಹುತೇಕ ತಂಡಗಳಿಂದ ಜಿದ್ದಾಜಿದ್ದಿನ ಹೋರಾಟ ಕಂಡು ಬರಲಿದ್ದು, ಇದರಿಂದ ಕೊನೆಯ ಹಂತದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.