ಬೆಂಗಳೂರು: ಇದೇ ಮೊದಲ ಬಾರಿಗೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನವೆಂಬರ್ 25 ಮತ್ತು 26 ರಂದು‘ಬೆಂಗಳೂರು ಕಂಬಳ ನಮ್ಮ ಕಂಬಳ’ ಶೀರ್ಷಿಕೆಯಡಿ ಕಂಬಳವನ್ನು ಆಯೋಜಿಸಲಾಗಿದ್ದು, ಕಂಬಳಕ್ಕೆ ಭವ್ಯ ಮೆರವಣಿಗೆ ಮೂಲಕ ಕೋಣಗಳು ಆಗಮಿಸಲಿವೆ.
ಹೌದು, ಸಿದ್ಧತೆಗಳು ಭರದಿಂದ ಸಾಗಿದ್ದು, ಕಂಬಳದಲ್ಲಿ ಭಾಗವಹಿಸಲು ಈಗಲೇ 228 ಜೋಡಿ ಕೋಣಗಳು ನೋಂದಣಿಯಾಗಿವೆ. ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳ ಕ್ರೀಡಾಕೂಟಕ್ಕೆ ಸುಮಾರು ಆರರಿಂದ ಎಂಟು ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ಕಂಬಳದ ಅಖಾಂಡಕ್ಕೆ 228 ಜೋಡಿ ಕೋಣಗಳು ಇಳಿಯಲಿವೆ.
ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ 77.50- 78 ಕೋಟಿ ರೂ. ವೆಚ್ಚ ತಗಲುವ ನಿರೀಕ್ಷೆಯಿದ್ದು, ಸರ್ಕಾರ ಒಂದು ಕೋಟಿ ರೂ. ಅನುದಾನ ಪ್ರಕಟಿಸಿದೆ. ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಗಳು ಹಣ ಸಹಾಯ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಕೈಜೋಡಿಸಿವೆ