ಬೆಂಗಳೂರು: ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಸಿಲಿಕಾನ್ ಸಿಟಿ ಬೆಂಗಳೂರಿನ ಅರಮನೆ ಆವರಣದಲ್ಲಿ ನವೆಂಬರ್ 25 ಹಾಗೂ 26ರಂದು ಕಂಬಳ ನಡೆಯಲಿದ್ದುಇಂದಿನಿಂದ ಕಂಬಳದ ಕಲರವರಕ್ಕೆ ಕ್ಷಣಗಣನೆ ಶುರುವಾಗಿದ್ದು ಅರಮನೆ ಮೈದಾನದಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ.
ಹೌದು, ಇಂದಿನಿಂದ(ನವೆಂಬರ್ 24) ಮೂರು ದಿನಗಳ ಕಾಲ ಕಂಬಳ ನಡೆಯಲಿದೆ. ಈ ಕೋಣಗಳ ಓಟ ರೇಸ್ನಲ್ಲಿ ಗೆಲ್ಲುವ ಕೋಣಗಳಿಗೆ ಬಹುಮಾನದ ಹಣವೆಷ್ಟು ಎಂಬುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಕಂಬಳದಲ್ಲಿ ವಿಜೇತರಾಗುವ ಕೋಣದ ಮಾಲೀಕರಿಗೆ 1 ಲಕ್ಷ ರೂ. ನಗದು, 16 ಗ್ರಾಂ ಸ್ವರ್ಣ ಕೊಡಲಾಗುತ್ತದೆ. ದ್ವಿತೀಯ ಸ್ಥಾನ ಗಳಿಸಿದವರಿಗೆ 50,000 ರೂ. ಜತೆಗೆ 2.8 ಗ್ರಾಂ ಚಿನ್ನ ಮತ್ತು ತೃತೀಯ ಸ್ಥಾನ ಪಡೆದವರಿಗೆ 25,000 ರೂ. ನಗದು ಹಾಗೂ 4 ಗ್ರಾಂ ಬಂಗಾರದ ಪದಕವನ್ನು ಬಹುಮಾನವಾಗಿ ನೀಡಲಾಗುತ್ತದೆ.
ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ 77.50- 78 ಕೋಟಿ ರೂ. ವೆಚ್ಚ ತಗಲುವ ನಿರೀಕ್ಷೆಯಿದ್ದು, ಸರ್ಕಾರ ಒಂದು ಕೋಟಿ ರೂ. ಅನುದಾನ ಪ್ರಕಟಿಸಿದೆ. ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಗಳು ಹಣ ಸಹಾಯ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಕೈಜೋಡಿಸಿವೆ.