ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗಣರಾಜ್ಯೋತ್ಸವಕ್ಕೆ ಕಬ್ಬನ್ ರಸ್ತೆಯಲ್ಲಿರುವ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತ ಬಿ. ದಯಾನಂದ್ ಸುದ್ದಿಗೋಷ್ಠಿ ನಡೆಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಬರುವವರು 8.30ರೊಳಗೆ ಹಾಜರಿರಬೇಕು. ಯಾವ ಯಾವ ಗೇಟ್ ನಿಗದಿಯಾಗಿದೆ ಅಲ್ಲಿಂದಲ್ಲೇ ಬರಬೇಕು. ಸಿಗರೇಟ್, ಚಾಕು, ಕಪ್ಪು ಕರವಸ್ತ್ರ, ಪಟಾಕಿ ಸೇರಿ ಹಲವು ವಸ್ತುಗಳಿಗೆ ನಿಷೇಧವಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರವಹಿಸಿದ್ದೇವೆ ಎಂದರು.
ನಗರದ ಆಯಕಟ್ಟಿನ ಪ್ರದೇಶಗಳಲ್ಲಿ ನಿಗಾ ಇಡಲಾಗಿದೆ. 9 ಡಿಸಿಪಿ, 16 ಎಸಿಪಿ, 46 ಇನ್ಸ್ಪೆಕ್ಟರ್ಗಳು ಸೇರಿದಂತೆ 575 ಅಧಿಕಾರಿಗಳು, 1000 ಸಿಬ್ಬಂದಿ ನಿಯೋಜಿಸಿದ್ದೇವೆ. ಜೊತೆಗೆ ಆರ್ಮಡ್ ಫೋರ್ಸ್, ಶ್ವಾನದಳ ಇರಲಿದೆ. ಬ್ಯಾಗೇಜ್ ಸ್ಕ್ಯಾನರ್ ಮತ್ತು 100 ಸಿಸಿಟಿವಿಗಳನ್ನ ಅಳವಡಿಸಲಾಗಿದೆ. ವಾಹನ ಸಂಚಾರದಲ್ಲೂ ಕೆಲ ಬದಲಾವಣೆ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದೇವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದರು.
ಕಾರ್ಯಕ್ರಮಕ್ಕೆ ಬರುವವರು 8.30ರೊಳಗೆ ಹಾಜರಿರಬೇಕು. ಯಾವ ಯಾವ ಗೇಟ್ ನಿಗದಿಯಾಗಿದೆ ಅಲ್ಲಿಂದಲ್ಲೇ ಬರಬೇಕು. ಸಿಗರೇಟ್, ಚಾಕು, ಕಪ್ಪು ಕರವಸ್ತ್ರ, ಪಟಾಕಿ ಸೇರಿ ಹಲವು ವಸ್ತುಗಳಿಗೆ ನಿಷೇಧವಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರವಹಿಸಿದ್ದೇವೆ ಎಂದರು.