ಚಿಕ್ಕಮಗಳೂರು: ರಾಜ್ಯಾಧ್ಯಕ್ಷ ಸ್ಥಾನದ ಹಗ್ಗ-ಜಗ್ಗಾಟದ ಬಗ್ಗೆ ಪ್ರತಿಕ್ರಿಯಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನಿರಾಕಿಸಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಲ್ಲ.
ನಾನು ಯಾವುದೇ ರೇಸ್ನಲ್ಲಿ ಇಲ್ಲ. ನಾನು ಈಗಿನ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇನೆ. ಕಾರ್ಯಕರ್ತ ಅನ್ನೋದನ್ನ ಯಾವತ್ತೂ, ಯಾರು ಕಿತ್ತುಕೊಳ್ಳಲು ಆಗುವುದಿಲ್ಲ.

ಪಕ್ಷ ನನಗೆ ಎಕ್ಸ್ ಪೀರಿಯನ್ಸ್, ಎಕ್ಸ್ ಪೋಸ್ ಎರಡಕ್ಕೂ ಅವಕಾಶ ಮಾಡಿಕೊಟ್ಟಿದೆ. ಈ ಸಂದರ್ಭದಲ್ಲಿ ನಾನು ಯಾವ ಹುದ್ದೆಯ ಆಕಾಂಕ್ಷಿಯಲ್ಲ ಎಂದರು.
