ಬೆಂಗಳೂರು: ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಜೈಲಲ್ಲಿ ದಿನಕಳೆಯುತ್ತಿದ್ದಾರೆ. ದೈಹಿಕ ಮತ್ತು ಮಾನಸಿಕವಾಗಿ ಕುಂದಿರುವ ದರ್ಶನ್ ಅಧ್ಯಾತ್ಮದತ್ತ ಒಲವು ಹೊಂದಿದ್ದಾರೆ. ಅವರ ದಿನಚರಿ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ಹಂಚಿಕೊಂಡಿದ್ದಾರೆ.
ಕೊಲೆ ಕೇಸಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್ ದಿನಚರಿ ಎಂಬ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿರುವಂತೆ, ದರ್ಶನ್ಗೆ ಚಾಪೆಯೇ ಹಾಸಿಗೆಯಾಗಿದೆ. ಕಂಬಳಿ ಹೊದ್ದು ನಿದ್ರೆ ಮಾಡ್ತಾರೆ. ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಅರ್ಧ ಗಂಟೆ ಧ್ಯಾನ ಮಾಡುತ್ತಾರೆ ಎಂದು ತಿಳಿದುಬಂದಿದೆ.
ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ
ಬೆಳಗ್ಗೆ ಆರು ಗಂಟೆಯಿಂದ ಏಳು ಗಂಟೆ ತನಕ ದರ್ಶನ್ ವಾಕಿಂಗ್ ಮಾಡುತ್ತಾರೆ. ತಿಂಡಿ ಮುಗಿಸಿ ಅಧ್ಯಾತ್ಮದ ಪುಸ್ತಕಗಳನ್ನು ಓದುತ್ತಿದ್ದಾರೆ. ಬರೋಬ್ಬರಿ ಹದಿನಾರು ಪುಸ್ತಕಗಳನ್ನು ಜೊತೆಗೆ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ. ಅವುಗಳಲ್ಲಿ ಬಹುತೇಕ ಅಧ್ಯಾತ್ಮದ ಪುಸ್ತಕಗಳೇ ಎನ್ನುವುದು ವಿಶೇಷ.
ಸ್ವಾಮಿ ವಿವೇಕಾನಂದ, ರಾಮಕೃಷ್ಣ ಪರಮಹಂಸ, ಭಗವದ್ಗೀತೆ ಸಂಬಂಧಿಸಿದ ಪುಸ್ತಕ ಓದುತ್ತಿದ್ದಾರೆ. ಯಾವುದೇ ಸಿಬ್ಬಂದಿಯ ಜೊತೆಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಜೈಲು ಸಿಬ್ಬಂದಿ ಮಾಹಿತಿ ನೀಡಿದ್ದಾರೆ.