ಬೆಂಗಳೂರು: ಕಚ್ಚಾ ತೈಲಗಳಾದ ಪೆಟ್ರೋಲ್ ಡೀಸೆಲ್ ಕೂಡ ಬೆಲೆಗಳಲ್ಲಿ ಏರಿಳಿತಕ್ಕೊಳಗಾಗುತ್ತಿದ್ದು, ದಿನಂಪ್ರತಿ ಬಳಕೆಯಾಗುವ ಈ ಇಂಧನಗಳು ಒಮ್ಮೊಮ್ಮೆ ಬೆಲೆ ಏರಿಸಿಕೊಂಡಿರುವುದು ವಾಹನ ಚಾಲಕರಿಗೆ ತಲೆನೋವಿನ ಸಮಸ್ಯೆಯಾಗಿದೆ. ನವೀಕರಿಸಲಾಗದೇ ಇರುವ ಇಂಧನಗಳಾಗಿ ಗುರುತಿಸಿಕೊಂಡಿರುವ ಪೆಟ್ರೋಲ್, ಡೀಸೆಲ್ ಅನ್ನು ಹಲವಾರು ಪ್ರಕ್ರಿಯೆಗಳ ಮೂಲಕ ಶುದ್ಧೀಕರಿಸಿ ಬಳಕೆಗೆ ಲಭ್ಯವಾಗಿಸಲಾಗುತ್ತದೆ.
ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್ಗೆ 92.39 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.96 ರೂ. ಇದೆ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯನ್ನು ಆಧರಿಸಿದೆ.
Pension Scheme: ನೀವು ಪ್ರತಿ ತಿಂಗಳು 3,475 ರೂ. ಹೂಡಿಕೆ ಮಾಡಿದ್ರೆ ತಿಂಗಳಿಗೆ 1 ಲಕ್ಷ ಪಿಂಚಣಿ ಸಿಗುತ್ತೆ!
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ಗೆ ಬ್ರೆಂಟ್ ಕಚ್ಚಾ ತೈಲವು 72.12 ಡಾಲರ್ ಆಗಿದ್ದು,ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್ಗೆ 68.34 ಡಾಲರ್ನಲ್ಲಿ ವಹಿವಾಟು ನಡೆಸುತ್ತಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 100.80 ರೂ. ಇದೆ.
ಬಿಹಾರ ಹಾಗೂ ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ದರ ಕೊಂಚ ಕಡಿಮೆಯಾಗಿದೆ. ಇಂದು ಬಿಹಾರದಲ್ಲಿ ಪೆಟ್ರೋಲ್ ಲೀಟರ್ಗೆ 9 ಪೈಸೆ ಇಳಿಕೆಯಾಗಿದ್ದು, 106.85 ರೂ.ಗೆ ಮತ್ತು ಡೀಸೆಲ್ ಲೀಟರ್ಗೆ 21 ಪೈಸೆ ಇಳಿಕೆಯಾಗಿ 93.59 ರೂ.ಗೆ ತಲುಪಿದೆ. ಇದಲ್ಲದೇ ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ 39 ಪೈಸೆ ಇಳಿಕೆಯಾಗಿದ್ದು ಲೀಟರ್ಗೆ 104.43 ರೂ.ಗೆ ಮತ್ತು ಡೀಸೆಲ್ ಲೀಟರ್ಗೆ 37 ಪೈಸೆ ಇಳಿಕೆಯಾಗಿ 90.95 ರೂ.ಗೆ ತಲುಪಿದೆ.