ಬೆಂಗಳೂರು: ಕಚ್ಚಾ ತೈಲಗಳಾದ ಪೆಟ್ರೋಲ್ ಡೀಸೆಲ್ ಕೂಡ ಬೆಲೆಗಳಲ್ಲಿ ಏರಿಳಿತಕ್ಕೊಳಗಾಗುತ್ತಿದ್ದು, ದಿನಂಪ್ರತಿ ಬಳಕೆಯಾಗುವ ಈ ಇಂಧನಗಳು ಒಮ್ಮೊಮ್ಮೆ ಬೆಲೆ ಏರಿಸಿಕೊಂಡಿರುವುದು ವಾಹನ ಚಾಲಕರಿಗೆ ತಲೆನೋವಿನ ಸಮಸ್ಯೆಯಾಗಿದೆ. ನವೀಕರಿಸಲಾಗದೇ ಇರುವ ಇಂಧನಗಳಾಗಿ ಗುರುತಿಸಿಕೊಂಡಿರುವ ಪೆಟ್ರೋಲ್, ಡೀಸೆಲ್ ಅನ್ನು ಹಲವಾರು ಪ್ರಕ್ರಿಯೆಗಳ ಮೂಲಕ ಶುದ್ಧೀಕರಿಸಿ ಬಳಕೆಗೆ ಲಭ್ಯವಾಗಿಸಲಾಗುತ್ತದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.77 ರೂ. ಮತ್ತು ಡೀಸೆಲ್ ಬೆಲೆ ಲೀಟರ್ಗೆ 87.67 ರೂ.ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.50 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 90.03 ರೂ., ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 105.01 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 91.82 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.80 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 92.39 ರೂ. ಇದೆ.
ಇಂದು ಬಿಹಾರದಲ್ಲಿ ಪೆಟ್ರೋಲ್ ಲೀಟರ್ಗೆ 8 ಪೈಸೆ ಏರಿಕೆಯಾಗಿ 106.94 ರೂ.ಗೆ ಮತ್ತು ಡೀಸೆಲ್ ಲೀಟರ್ಗೆ 20 ಪೈಸೆ ಏರಿಕೆಯಾಗಿ 93.80 ರೂ.ಗೆ ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ. ಉತ್ತರಪ್ರದೇಶದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 40 ಪೈಸೆ ಇಳಿಕೆಯಾಗಿ 94.46 ರೂ.ಗೆ ಮತ್ತು ಡೀಸೆಲ್ ಪ್ರತಿ ಲೀಟರ್ಗೆ 46 ಪೈಸೆ ಇಳಿಕೆಯಾಗಿ 87.52 ರೂ.ಗೆ ತಲುಪಿದೆ.
Eye Care Tips: ಕಣ್ಣಿನ ರೆಪ್ಪೆಯಲ್ಲಾಗುವ ಕುರು ಸಮಸ್ಯೆಗೆ ಕಾರಣಗಳೇನು..? ಬಂದಾಗ ಏನು ಮಾಡಬೇಕು..? ಇಲ್ಲಿದೆ ಉತ್ತರ
ಅದೇ ಸಮಯದಲ್ಲಿ, ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 97 ಪೈಸೆ ಇಳಿಕೆಯಾಗಿ 103.97 ರೂ.ಗೆ ಮತ್ತು ಡೀಸೆಲ್ ಲೀಟರ್ಗೆ 93 ಪೈಸೆ ಇಳಿಕೆಯಾಗಿ 90.52 ರೂ.ಗೆ ತಲುಪಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ಗೆ 74.22 ಡಾಲರ್ ಆಗಿದ್ದು, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್ಗೆ 70.63 ಡಾಲರ್ನಲ್ಲಿ ವಹಿವಾಟು ನಡೆಸುತ್ತಿದೆ.
ಇಂದು ಹರಿದ್ವಾರದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 92.77 ರೂ . ಇಂದು ನೈನಿತಾಲ್ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 92.74 ರೂ. ಇಂದು ಅಗರ್ತಲಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.81 ರೂ. ಇಂದು ಗ್ಯಾಂಗ್ಟಾಕ್ನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 101.75 ರೂ. ಇಂದು ಪುದುಚೇರಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.26 ರೂ.
ಇಂದು ಭುವನೇಶ್ವರದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 101.39 ರೂ. ಇಂದು ಕೊಹಿಮಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.75 ರೂ. ಇಂದು ಐಜ್ವಾಲ್ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 99.26 ರೂ. ಇಂಫಾಲದಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್ಗೆ 99.20 ರೂ. ಇಂದು ಶಿಲ್ಲಾಂಗ್ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.33 ರೂ.
ಇದಲ್ಲದೇ ವಯನಾಡಿನಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್ಗೆ 107.32 ರೂ. ಇಂದು ದಿಯೋಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.98 ರೂ. ಇಂದು ಉಧಂಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.71 ರೂ. ಇದೆ.