ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಬಿಜೆಪಿ-ಜೆಡಿಎಸ್ ನ ಬೆಂಗಳೂರು ಟು ಮೈಸೂರು ಪಾದಯಾತ್ರೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ.
Parameshwar: ಪರಿಶಿಷ್ಟರ ಹಣ ದುರ್ಬಳಕೆ ಸುಳ್ಳು ಆರೋಪ: ಜಿ ಪರಮೇಶ್ವರ್!
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ವಿಚಾರವಾಗಿ ಆಗಸ್ಟ್ 3ರಿಂದ ಬೆಂಗಳೂರಿನಿಂದ ಪಾದಯಾತ್ರೆ ಆರಂಭಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಹೇಳಿದ್ದಾರೆ.
ಬಿಜೆಪಿ, ಜೆಡಿಎಸ್ ನಾಯಕರ ಸಭೆ ಬಳಿಕ ಮಾತನಾಡಿದ ಅವರು, ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುತ್ತೇವೆ. ಮೈಸೂರಿನಲ್ಲಿ ಆ.10ರಂದು ಪಾದಯಾತ್ರೆ ಸಮಾರೋಪ ಸಮಾರಂಭ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣಗಳು ದಿನೇದಿನೆ ಹೊಸ ತಿರುವು ಪಡೆದುಕೊಳ್ಳುತ್ತಿರುವುದರ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಾರ ದಿಲ್ಲಿಗೆ ತೆರಳುವ ಸಾಧ್ಯತೆಗಳಿವೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ವಾಲ್ಮೀಕಿ, ಮುಡಾ ಹಗರಣಗಳ ಬಗ್ಗೆ ಸಿದ್ದರಾಮಯ್ಯ ಮಾಹಿತಿ ನೀಡುವ ಸಾಧ್ಯತೆಗಳಿವೆ.