ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಅದ್ಭುತ ಜಯ ಸಾಧಿಸುವ ಮೂಲಕ ಆತಿಥೇಯ ಭಾರತ ತಂಡವು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಸಿಎಂ ಸಿದ್ದರಾಮಯ್ಯ ಗೆ ಮೂಡಾ ನಂತರ ರೀಡೂ ಸಂಕಷ್ಟ: ವರದಿ ಸಲ್ಲಿಸುವಂತೆ ರಾಜ್ಯಪಾಲರ ಸೂಚನೆ!
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ, 280 ರನ್ಗಳ ಭರ್ಜರಿ ಜಯ ದಾಖಲಿಸಿದೆ. ಚೆನ್ನೈನ ಎಂಎ ಚಿದಂಬರಂ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಆಲ್ರೌಂಡ್ ಆಟ ಹಾಗೂ ಶುಭ್ಮನ್ ಗಿಲ್-ರಿಷಭ್ ಪಂತ್ ಶತಕದಾಟದ ನೆರವಿನಿಂದ ಅಮೋಘ ಜಯ ಸಾಧಿಸಿದ ಟೀಮ್ ಇಂಡಿಯಾ, ಎರಡು ಪಂದ್ಯಗಳ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.
ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯವು ಸೆಪ್ಟೆಂಬರ್ 27ರಿಂದ ಕಾನ್ಪುರದಲ್ಲಿ ಆರಂಭವಾಗಲಿದೆ. ಎರಡನೇ ಟೆಸ್ಟ್ ಪಂದ್ಯದಿಂದ ಕೆ ಎಲ್ ರಾಹುಲ್ ಅವರನ್ನು ಕೈಬಿಡುವ ಸಾಧ್ಯತೆಯಿದೆ ಎನ್ನುವ ಚರ್ಚೆ ಕ್ರಿಕೆಟ್ ವಲಯದಲ್ಲಿ ಕೇಳಿ ಬಂದಿತ್ತು. ಏಕೆಂದರೆ ಚೆಪಾಕ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ರಾಹುಲ್ ಅವರಿನಿಂದ ಮೊದಲ ಇನಿಂಗ್ಸ್ನಲ್ಲಿ ನಿರೀಕ್ಷಿತ ಪ್ರದರ್ಶನ ಮೂಡಿ ಬಂದಿರಲಿಲ್ಲ. ಹೀಗಿದ್ದೂ ಬಿಸಿಸಿಐ ಆಯ್ಕೆ ಸಮಿತಿಯು ರಾಹುಲ್ಗೆ ಮತ್ತೊಂದು ಅವಕಾಶ ನೀಡಲು ತೀರ್ಮಾನಿಸಿದೆ. ಆದರೆ ಕಾನ್ಪುರ ಟೆಸ್ಟ್ ಪಂದ್ಯದ ಆಡುವ ಹನ್ನೊಂದರ ಬಳಗದಲ್ಲಿ ಸರ್ಫರಾಜ್ ಖಾನ್ ಅಥವಾ ಕೆ ಎಲ್ ರಾಹುಲ್ ಈ ಇಬ್ಬರಲ್ಲಿ ಯಾರಿಗೆ ಸ್ಥಾನ ಸಿಗಲಿದೆ ಎನ್ನುವ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.
ಬಾಂಗ್ಲಾದೇಶ ಎದುರಿನ ಚೆನ್ನೈ ಟೆಸ್ಟ್ ಗೆಲುವಿನ ಬಳಿಕ ಮಾತನಾಡಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಈ ವರ್ಷಾರಂಭದಲ್ಲಿ ಇಂಗ್ಲೆಂಡ್ ಎದುರು ಯಾವ ರೀತಿಯಲ್ಲಿ ಆಡಿದ್ದೆವೋ ಅದೇ ರೀತಿಯ ಪ್ರದರ್ಶನವನ್ನು ಮುಂದುವರೆಸಿಕೊಂಡು ಹೋಗುವುದಾಗಿ ತಿಳಿಸಿದ್ದಾರೆ. ಅನುಭವಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಅದ್ಭುತ ಆಲ್ರೌಂಡ್ ಪ್ರದರ್ಶನ ತೋರುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
515 ರನ್ಗಳ ಕಠಿಣ ಗುರಿ ಬೆನ್ನತ್ತಿದ ಬಾಂಗ್ಲಾದೇಶ ತಂಡವು ರವಿಚಂದ್ರನ್ ಅಶ್ವಿನ್ ಮಾರಕ ದಾಳಿಗೆ ತತ್ತರಿಸಿ 234 ರನ್ಗಳಿಗೆ ಸರ್ವಪತನ ಕಂಡಿತು. ಈ ಮೂಲಕ ಭಾರತ 280 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿತು. ಅಶ್ವಿನ್ ಎರಡನೇ ಇನಿಂಗ್ಸ್ನಲ್ಲಿ 88 ರನ್ ನೀಡಿ 6 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಇದಕ್ಕೂ ಮುನ್ನ ಮೊದಲ ಇನಿಂಗ್ಸ್ನಲ್ಲಿ ಟೀಂ ಇಂಡಿಯಾ 144 ರನ್ಗಳಿಗೆ 6 ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಸಂದರ್ಭದಲ್ಲಿ ಕ್ರೀಸ್ಗಿಳಿದ ಅಶ್ವಿನ್, ಜಡೇಜಾ ಜತೆಗೂಡಿ 7ನೇ ವಿಕೆಟ್ಗೆ 199 ರನ್ಗಳ ಜತೆಯಾಟವಾಡಿದರು. ಅಶ್ವಿನ್ 133 ಎಸೆತಗಳನ್ನು ಎದುರಿಸಿ 113 ರನ್ ಸಿಡಿಸಿ ತಂಡಕ್ಕೆ ಆಸರೆಯಾಗಿದ್ದರು.
ಇದೀಗ ಬಾಂಗ್ಲಾದೇಶ ಎದುರಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಮೊದಲ ಪಂದ್ಯಕ್ಕೆ ಆಯ್ಕೆ ಮಾಡಿದ ತಂಡವನ್ನೇ ಮತ್ತೆ ಆಯ್ಕೆ ಮಾಡಿದೆ. ಕಾನ್ಪುರ ಟೆಸ್ಟ್ಗೆ ಭಾರತ ಕ್ರಿಕೆಟ್ ತಂಡ ಹೀಗಿದೆ ನೋಡಿ:
ರೋಹಿತ್ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್(ವಿಕೆಟ್ ಕೀಪರ್), ಧೃವ್ ಜುರೆಲ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಲ್.