ರಾಯ್ಸ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ, ಕೆ.ಎಂ.ರಘು (KM Raghu) ನಿರ್ದೇಶನದಲ್ಲಿ ಶ್ರೀ (Shri) ಹಾಗೂ ಪ್ರಣತಿ ನಾಯಕ- ನಾಯಕಿಯಾಗಿ ನಟಿಸಿರುವ ಜಸ್ಟ್ ಪಾಸ್ (Just Past) ಚಿತ್ರದ ಟೀಸರ್ (Teaser) ಡಿಸೆಂಬರ್ 10ರಂದು ದುಬೈನಲ್ಲಿ ನಡೆಯಲಿರುವ ದುಬೈ ದಸರಾ ಸಂಗೀತ ರಸಸಂಜೆ ಕಾರ್ಯಕ್ರಮದಲ್ಲಿ ಪ್ರಸಾರವಾಗಲಿದೆ. ನಾಡಿನ ಹೆಸರಾಂತ ಕಲಾವಿದರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಸಾವಿರಾರು ಕನ್ನಡಿಗರ ಸಮ್ಮುಖದಲ್ಲಿ ಜಸ್ಟ್ ಪಾಸ್ ಚಿತ್ರದ ಟೀಸರ್ ಪ್ರದರ್ಶನವಾಗಲಿದೆ. ಡಿಸೆಂಬರ್ 13 ರಂದು ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ.
ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಚಿತ್ರದಲ್ಲಿ ಇರುವುದೆಲ್ಲವ ಬಿಟ್ಟು, ಗಜಾನನ ಗ್ಯಾಂಗ್ ಖ್ಯಾತಿಯ ನಟ ಶ್ರೀ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಸ್ಕ್ರಿಪ್ಟ್ ಕೆಲಸಗಳೆಲ್ಲ ಮುಗಿಸಿ ಶೂಟಿಂಗ್ ಹೊರಡಲು ಸಿನಿಮಾ ತಂಡ ಸಕಲ ತಯಾರಿ ನಡೆಸಿಕೊಂಡಿದೆ. ಚಿತ್ರಕ್ಕೆ ಹೀರೋಯಿನ್ ಹುಡುಕಾಟಲ್ಲಿದ್ದ ಚಿತ್ರತಂಡಕ್ಕೆ ಹೊಸ ಪ್ರತಿಭೆ ಪ್ರಣತಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಡಾನ್ಸ್ ಕರ್ನಾಟಕ ಡಾನ್ಸ್, ಫ್ಯಾಮಿಲಿ ವಾರ್ ಸೀಸನ್ 2 ರನ್ನರ್ ಅಪ್ ಆಗಿರುವ ಪ್ರಣತಿ ಬ್ರಹ್ಮಗಂಟು ಸೀರಿಯಲ್ ನಲ್ಲೂ ನಟಿಸಿದ್ದಾರೆ. ಈಗ ಜಸ್ಟ್ ಪಾಸ್ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು.