ಒಳ್ಳೆಯ ಹುಡುಗ ಪ್ರಥಮ್ (Pratham) ಮತ್ತೊಂದು ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗೆ ‘ಫಸ್ಟ್ ನೈಟ್ ವಿತ್ ದೇವ’ (First Night with Deva) ಎಂದು ಹಸರಿಡಲಾಗಿದೆ. ಈ ಚಿತ್ರದ ಮೂಲಕ ಕನ್ನಡಕ್ಕೆ ಮಿಸ್ ಇಂಡಿಯಾ ರನ್ನರ್ ಅಪ್ ಆಗಿರುವ ಮಾನ್ಯ ಸಿಂಗ್ (Manya Singh) ಎಂಟ್ರಿ ಕೊಡುತ್ತಿದ್ದಾರೆ. ನವೆಂಬರ್ 16ರಂದು ಈ ಸಿನಿಮಾಗೆ ಚಾಲನೆ ಸಿಗಲಿದೆ.
ಪ್ರಥಮ್ ಡಬಲ್ ಸಂಭ್ರಮದಲ್ಲಿದ್ದಾರೆ. ಇದೇ ತಿಂಗಳು ಅವರ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ನಡುವೆ ಹೊಸ ಸಿನಿಮಾವನ್ನೂ ಒಪ್ಪಿಕೊಂಡಿದ್ದಾರೆ. ಕ್ಯಾಚಿ ಟೈಟಲ್ ನಿಂದಾಗಿ ಸಿನಿಮಾ ಗಮನ ಸೆಳೆಯುತ್ತಿದೆ. ಈ ಹಿಂದೆ ಕರ್ನಾಟಕದ ಅಳಿಯ ಎಂಬ ಟೈಟಲ್ ಇಟ್ಟುಕೊಂಡು ಸಿನಿಮಾ ಮಾಡಿದ್ದ ಪ್ರಥಮ್, ಇದೀಗ ಫಸ್ಟ್ ನೈಟ್ ಗೆ ಸಿದ್ಧವಾಗಿದ್ದಾರೆ.
ಈ ಸಿನಿಮಾದ ಮೂಲಕ ಕನ್ನಡಕ್ಕೆ ಬರುತ್ತಿರುವ ಮಾನ್ಯ ಈ ಹಿಂದೆ ಫೆಮಿನಾ ಮಿಸ್ ಇಂಡಿಯಾದಲ್ಲಿ ಭಾಗಿಯಾಗಿದ್ದರು. ತಂದೆ ಆಟೋ ರಿಕ್ಷಾ ಚಾಲಕ ಎನ್ನುವ ಕಾರಣಕ್ಕಾಗಿ ಸಾಕಷ್ಟು ಸುದ್ದಿ ಆಗಿದ್ದರು. ಇದೀಗ ಕನ್ನಡ ಚಿತ್ರದ ಮೂಲಕ ಅವರು ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಬಿಗ್ ಬಾಸ್ ಹಿಂದಿಯಲ್ಲೂ ಮಾನ್ಯ ಕಾಣಿಸಿಕೊಂಡಿದ್ದರು.