ಬೆಂಗಳೂರು: ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನ (National Science Day) ವನ್ನು ಆಚರಣೆ ಮಾಡಲಾಗುತ್ತದೆ. ವಿಜ್ಞಾನ ಮತ್ತು ಅದರ ಪ್ರಾಮುಖ್ಯತೆ ಪ್ರತಿಯೊಬ್ಬರಿಗೂ ತಿಳಿದಿರಬೇಕು. ಜನಸಾಮನ್ಯರಲ್ಲಿ ವಿಜ್ಞಾನದ ಬಗ್ಗೆ ಅರಿವು ಮೂಡಿಸುವುದೇ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ ಮಾಡುವುದು ಮೂಲ ಉದ್ದೇಶವಾಗಿದೆ.
ಫೆಬ್ರವರಿ 28 ರಂದೇ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಣೆ ಮಾಡಬೇಕು ಎಂದು 1986 ರಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ ಕಂಮ್ಯುನಿಕೇಷನ್ (NCSTC) ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು.
ಡಯಟ್, ವ್ಯಾಯಾಮ ಯಾವುದೂ ಇಲ್ಲದೇ ಹೊಟ್ಟೆಯ ಬೊಜ್ಜನ್ನು ಕರಗಿಸಬಹುದು..! ಹೇಗೆ ಗೊತ್ತಾ..?
ಆಗ ಎನ್ಸಿಎಸ್ಟಿಸಿಯ ಈ ಮನವಿಯನ್ನು ಒಪ್ಪಿದ ಅಂದಿನ ಸರ್ಕಾರ ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ದೇಶದಾದ್ಯಂತ ಆಚರಿಸುವಂತೆ ಘೋಷಿಸಿತು. ನಂತರ ಮೊದಲ ರಾಷ್ಟ್ರೀಯ ವಿಜ್ಞಾನ ದಿನವನ್ನು 1987 ಫೆಬ್ರವರಿ 28 ರಂದು ಆಚರಣೆ ಮಾಡಲಾಯಿತು.
ಈ ದಿನ, 1928 ರಲ್ಲಿ, ಭಾರತೀಯ ಭೌತಶಾಸ್ತ್ರಜ್ಞ ಚಂದ್ರಶೇಖರ ವೆಂಕಟ ರಾಮನ್(ಸಿವಿ ರಾಮನ್) ಸ್ಪೆಕ್ಟ್ರೋಸ್ಕೋಪಿ ಕ್ಷೇತ್ರದಲ್ಲಿ ರಾಮನ್ ಪರಿಣಾಮ ಎಂಬ ಮಹತ್ವದ ಆವಿಷ್ಕಾರವನ್ನು ಮಾಡಿದರು. ಅವರ ಈ ಕೆಲಸಕ್ಕಾಗಿ 1930 ರಲ್ಲಿ ಭೌತಶಾಸ್ತ್ರದ ಪ್ರತಿಷ್ಠಿತ ನೊಬೆಲ್ ಪ್ರಶಸ್ತಿಯನ್ನು ನೀಡಲಾಯಿತು. ವಿಜ್ಞಾನ ವಿಭಾಗದಿಂದ ನೊಬೆಲ್ ಪಡೆದ ಏಷ್ಯಾದ ಮೊಟ್ಟ ಮೊದಲ ವಿಜ್ಞಾನಿ ಎಂಬ ಖ್ಯಾತಿ ರಾಮನ್ ಅವರಿಗಿದೆ.
ರಾಮನ್ ಪರಿಣಾಮ ಎಂದರೇನು?
ಒಂದು ದಿನ ಹೀಗೆ ಹಡಗಿನಲ್ಲಿ ಪ್ರಯಾಣಿಸುತ್ತಿದ್ದ ಸಿವಿ ರಾಮನ್ ಅವರಿಗೆ ಸಮುದ್ರ ಏಕೆ ನೀಲಿಯಾಗಿದೆ ಎಂಬ ಪ್ರಶ್ನೆ ಉದ್ಭವಿಸಿತಂತೆ. ಅದು ಆಕಾಶದ ಬಣ್ಣದ ಪ್ರತಿಫಲನವೋ ಅಥವಾ ಈ ನೀಲಿ ಬಣ್ಣದ ಹಿಂದೆ ಬೇರೇನಾದರೂ ಗುಟ್ಟು ಅಡಗಿದೆಯೋ ಎಂದು ಪತ್ತೆ ಮಾಡಲು ಹೊರಟ ರಾಮನ್ ಸೂರ್ಯನ ಬೆಳಕು ನೀರಿನಲ್ಲಿ ಚದುರಿಹೋಗುವುದೇ ಸಮುದ್ರದ ನೀರು ನೀಲಿಯಾಗಿ ಕಾಣಲು ಕಾರಣ ಎಂಬ ವಿಷಯವನ್ನು ಕಂಡುಹಿಡಿದರು. ಇದೇ ಅಂಶವನ್ನು ಇಟ್ಟುಕೊಂಡು ಮುಂದೆ ಅವರು ತಮ್ಮ ಅಧ್ಯಯನವನ್ನು ಮುಂದುವರೆಸಿದರು.
ಕೋಲ್ಕತಾದ ಇಂಡಿಯನ್ ಅಸೋಸಿಯೇಷನ್ ಫಾರ್ ಕಲ್ಟಿವೇಷನ್ ಆಫ್ ಸೈನ್ಸ್ನಲ್ಲಿ ರಾಮನ್ ಅವರು ತಮ್ಮ ಸಹೋದ್ಯೋಗಿಗಳೊಡನೆ ಅಧ್ಯಯನ ನಡೆಸಿ ರಾಮನ್ ಪರಿಣಾಮವನ್ನು ಅವಿಷ್ಕಾರ ಮಾಡಿದರು. ಅವರ ಈ ಸಾಧನೆಗೆ 1930ರಲ್ಲಿ ನೊಬೆಲ್ ಪುರಸ್ಕಾರ ದೊರೆತಿತು.
ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ ಮಾಡುವ ಉದ್ದೇಶವೇನು?
ಈ ದಿನವನ್ನು ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು, ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವವನ್ನು ಮೂಡಿಸಲು, ವಿಜ್ಞಾನದ ಬಗ್ಗೆ ಆಸಕ್ತಿಯನ್ನು ಬೆಳೆಸಲು, ಪ್ರಯೋಗಗಳ ಮೂಲಕ ಹೊಸ ಅವಿಷ್ಕಾರಗಳನ್ನು ಮಾಡಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವುದಕ್ಕೆ ಈ ದಿನವನ್ನು ಆಚರಿಸಲಾಗುತ್ತೆ.