ಮೈಸೂರು:- ಪ್ರವಾಸಿಗರು ಹಾಗೂ ಸ್ಥಳೀಯರು ಅರಮನೆ ವೀಕ್ಷಣೆಗೆ ಬಂದಾಗ, ಗಂಟೆಗಂಟೆ ಕಾಯಬೇಕಿಲ್ಲ. ಯಾಕೆಂದ್ರೆ ವಾಟ್ಸ್ಆ್ಯಪ್ ಮೂಲಕವೇ ಟಿಕೆಟ್ ಮಾಡಲು ನಿಮಗೆ ಅವಕಾಶ ನೀಡಲಾಗಿದೆ.
ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾದರೂ ಅಚ್ಚರಿ ಇಲ್ಲ: ಸಮೃದ್ಧಿ ಮಂಜುನಾಥ್!
ಇಡಿಸಿಎಸ್ ವತಿಯಿಂದ ಮೊಬೈಲ್ ಒನ್ ಯೋಜನೆಯ ಮೂಲಕ ಮೈಸೂರು ಅರಮನೆ ವೀಕ್ಷಣೆಗೆ ಅನುಕೂಲ ಮಾಡಿಕೊಡಲಾಗಿದೆ. ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಅ.3 ರಿಂದ ಅ.12 ರ ವರೆಗೆ ಜರುಗಲಿದೆ. ಇದಕ್ಕಾಗಿ ಈಗಾಗಲೇ ತಯಾರಿ ಶುರುವಾಗಿದೆ. ಇನ್ನು ಮತ್ತೊಂದೆಡೆ ಇಂದಿನಿಂದ ಮೈಸೂರು ಅರಮನೆ ವೀಕ್ಷಣಗೆ ವಾಟ್ಸಾಪ್ ಟಿಕೆಟ್ ನೀಡಲಾಗುತ್ತಿದೆ.
ಮೈಸೂರು ಅರಮನೆ ನೋಡಲು ಬರುವ ಪ್ರವಾಸಿಗರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ EDCS ಮೊಬೈಲ್ ಒನ್ ಯೋಜನೆಯ ಮೂಲಕ ಟಿಕೆಟ್ ಖರೀದಿಗೆ ಅವಕಾಶ ಮಾಡಿಕೊಡಲಾಗುತ್ತಿದೆ.
ಪ್ರವಾಸಿಗರು ಸರ್ಕಾರದ ಇಡಿಸಿಎಸ್ ಮೊಬೈಲ್ ಒನ್ ಯೋಜನೆಯ ಮೂಲಕ ಮೊಬೈಲ್ನಲ್ಲೆ ಅರಮನೆ ವೀಕ್ಷಣೆಗೆ ಟಿಕೆಟ್ ಖರೀದಿ ಮಾಡಬಹುದು. ವಾಟ್ಸಾಪ್ನಲ್ಲಿ 8884160088 ನಂಬರ್ಗೆ ಎಜಿ ಎಂದು ಟೈಪ್ ಮಾಡಿ ಸಂದೇಶ ಕಳಿಸುವ ಮೂಲಕ ಟಿಕೆಟ್ ಪಡೆಯಬಹುದು. ವಾಟ್ಸಾಪ್ನಲ್ಲಿ ಖರೀದಿಸಿದ ಟಿಕೆಟ್ 5 ದಿನದವರೆಗೆ ಮಾನ್ಯತೆ ಇರುತ್ತದೆ. ಇದರಿಂದ ಸರತಿ ಸಾಲಿನಲ್ಲಿ ಬಂದು ಟಿಕೆಟ್ ಖರೀದಿಸುವ ಸಮಯ ಸೇವ್ ಆಗಲಿದೆ.