ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ಗೆ (Gurukiran) ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ನಾಳೆ ನಡೆಯಲಿರೋ ಬೆಂಗಳೂರು ವಿವಿಯ 59ನೇ ಘಟಿಕೋತ್ಸವದಲ್ಲಿ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗುತ್ತದೆ ಅಂತ ಬೆಂಗಳೂರು ವಿವಿ ಕುಲಪತಿ ಡಾ.ಜಯಕರ್ ತಿಳಿಸಿದ್ದಾರೆ.
ಘಟಿಕೋತ್ಸವದ ಹಿನ್ನಲೆಯಲ್ಲಿ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಲೆ, ಸಂಗೀತ ಕ್ಷೇತ್ರದ ಸಾಧನೆಗೆ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಕ್ರೀಡೆ, ಸಮಾಜ ಸೇವೆ ಕ್ಷೇತ್ರದಲ್ಲಿನ ಸಾಧನೆಗೆ ಕೆ.ಎಸ್.ರಾಜಣ್ಣ ರಾಜ್ಯ ಮಾಜಿ ಆಯುಕ್ತರು,ರಾಜ್ಯ ಅಂಗವಿಕಲ ವ್ಯಕ್ತಿಗಳ ಅಧಿನಿಯಮ, ಕರ್ನಾಟಕ ಸರ್ಕಾರ ಇವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಘೋಷಿಸಿದೆ ಅಂತ ತಿಳಿಸಿದರು.
ಈ ಬಾರಿ 31382 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗ್ತಿದೆ. 140 ಜನರಿಗೆ ಪಿಹೆಚ್ಡಿ ಪ್ರದಾನ ಮಾಡಲಾಗುತ್ತದೆ ಅಂತ ಮಾಹಿತಿ ನೀಡಿದ್ರು. ಕಾರಣಾಂತರಗಳಿಂದ ರಾಜ್ಯಪಾಲರು ನಾಳೆಯ ಘಟಿಕೋತ್ಸವಕ್ಕೆ ಗೈರಾಗಲಿದ್ದಾರೆ. ಯುಜಿಸಿಯ ವೈಸ್ ಚಾನ್ಸೆಲರ್ ಡಾ.ದೀಪಕ್ ಕುಮಾರ್ ಶ್ರೀವಾಸ್ತವ್ ಮುಖ್ಯ ಆತಿಥಿಗಳಾಗಿ ಭಾಗಿಯಾಗಲಿದ್ದಾರೆ ಅಂತ ಮಾಹಿತಿ ನೀಡಿದ್ರು.