ನವದೆಹಲಿ: ಆಳವಾದ ಕಂದಕಕ್ಕೆ ಬಸ್ಸೊಂದು ಬಿದ್ದ ಪರಿಣಾಮ ಕನಿಷ್ಠ 38 ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಭಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಘಟನೆಯ ಕುರಿತು ಸಂತಾಪ ಸೂಚಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಂಭವಿಸಿದ ಬಸ್ ಅಪಘಾತ ದುಃಖಕರವಾಗಿದೆ.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ತಮ್ಮ ಹತ್ತಿರದ ಮತ್ತು ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪಿಎಂಒ ಎಕ್ಸ್ನಲ್ಲಿ (X) ಪೋಸ್ಟ್ ಮಾಡಿದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ. ಅಲ್ಲದೇ ಗಾಯಗೊಂಡವರಿಗೆ 50,000 ರೂ. ನೆರವು ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.