ಬೆಂಗಳೂರು: ಬಿಜೆಪಿಯಿಂದ ಮತ್ತೆ ಆಪರೇಷನ್ ಕಮಲ ಪ್ರಯತ್ನ ವಿಚಾರವಾಗಿ ಮಾತನಾಡಿದ ಸಂಸದ ಡಿಕೆ ಸುರೇಶ್, ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೆ ಏನಾದರೂ ಗೊತ್ತಿದೆಯಾ? ಎಂದು ಸಂಸದ ಡಿ.ಕೆ.ಸುರೇಶ್ ಬಿಜೆಪಿ ವಿರುದ್ಧ ಕಿಡಿಕಾರಿದರು.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನರಿಗೆ ಏನು ಬೇಕೋ ಅದನ್ನು ಮಾಡುವುದು ಬಿಜೆಪಿಗೆ ಗೊತ್ತಿಲ್ಲ. ಭ್ರಷ್ಟಾಚಾರದಲ್ಲಿ ಮುಳುಗಿದ್ದರಿಂದ ಇವತ್ತು ಕೆಲಸ ಇಲ್ಲದೆ ಕೂತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಯವರಿಗೆ ಆಘಾತ ಆಗಿದೆ. ಆಘಾತ ತಪ್ಪಿಸಿಕೊಳ್ಳಲು ಆಪರೇಷನ್ ಕಮಲದ ಹೆಸರು ಹೇಳುತ್ತಿದ್ದಾರೆ ಎಂದರು. ವಿಪಕ್ಷ ನಾಯಕರು ಇದ್ದಾರೋ ಇಲ್ವೋ ಅವರಿಗೆ ಬಿಟ್ಟಿದ್ದು. ಆದರೆ ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದು ನಮ್ಮ ತಟ್ಟೆಯಲ್ಲಿ ಜಿರಳೆ ಹುಡಿಕಿದೇ ನಾವೇನು ಮಾಡಲು ಆಗುತ್ತದೆ ಎಂದರು.