ಮೈಸೂರು: ಕನ್ನಡ ಚಿತ್ರರಂಗದ ಸ್ಟಾರ್ ನಟ ಡಾಲಿ ಧನಂಜಯ್ ಸದ್ಯ ಮದುವೆ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಫೆಬ್ರವರಿ 15-16 ರಂದು ಮೈಸೂರಿನಲ್ಲಿ ಧನಂಜಯ್ ಮತ್ತು ಧನ್ಯತಾ ಅದ್ಧೂರಿ ಮದುವೆ ನಡೆಯಲಿದೆ. ಮದುವೆ ಹಿನ್ನೆಲೆ ಸ್ನೇಹಿತರು, ಸೆಲೆಬ್ರಿಟಿಗಳು ಹಾಗೂ ರಾಜಕಾರಣಿಗಳಿಗೆ ಧನಂಜಯ್ ಹಾಗೂ ಧನ್ಯತಾ ಆಮಂತ್ರಣ ಪತ್ರಿಕೆ ನೀಡ್ತಿದ್ದಾರೆ.
ಇದೀಗ ಚಾಮುಂಡಿ ಬೆಟ್ಟಕ್ಕೆ ನಟ ಡಾಲಿ ಧನಂಜಯ್ ಹಾಗೂ ಭಾವಿ ಪತ್ನಿ ಡಾ. ಧನ್ಯತಾ ಭಾನುವಾರ ಬೆಳಗ್ಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಡಾಲಿ ಧನಂಜಯ್ ಮದುವೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದಿದ್ದಾರೆ. ಬಳಿಕ ಲಗ್ನ ಪತ್ರಿಕೆಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಅವರ ಜೊತೆ ಭಾವಿ ಪತ್ನಿ ಡಾ. ಧನ್ಯತಾ ಕೂಡ ಇದ್ದರು.
Supreme Court Recruitment: ಸುಪ್ರೀಂ ಕೋರ್ಟ್ʼನಲ್ಲಿದೆ ಉದ್ಯೋಗಾವಕಾಶ! ಆಸಕ್ತರು ಇವತ್ತೇ ಅಪ್ಲೈ ಮಾಡಿ
ದೇವರ ದರ್ಶನದ ಬಳಿಕ ಮಾತನಾಡಿದ ಡಾಲಿ, ಮದುವೆಗೆ ಸಿದ್ಧತೆಗಳು ನಡೆಯುತ್ತಿವೆ. ಲಗ್ನ ಪತ್ರಿಕೆ ಕೊಡುವುದನ್ನು ಶುರು ಮಾಡಿದ್ದೇನೆ. ಹಿರಿಯರಿಗೆ ಈಗಾಗಲೇ ಲಗ್ನ ಪತ್ರಿಕೆ ಕೊಡಲು ಶುರು ಮಾಡಿದ್ದೇನೆ. ಇಂದು ಚಾಮುಂಡಿ ಬೆಟ್ಟದಲ್ಲಿ ಲಗ್ನ ಪತ್ರಿಕೆಗೆ ಪೂಜೆ ಸಲ್ಲಿಸಿದ್ದೇನೆ. ಮೈಸೂರಿನಲ್ಲೇ ಮದುವೆ ನಡೆಯುತ್ತಿದೆ. ಎಲ್ಲರೂ ಬಂದು ಆಶೀರ್ವಾದ ಮಾಡಿ. ಎಲ್ಲರಿಗೂ ಲಗ್ನ ಪತ್ರಿಕೆ ಕೊಡುತ್ತೇನೆ ಎಂದು ತಿಳಿಸಿದರು.