ಗದಗ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯಾದ್ಯಂತ ಹಲವಾರು ಮಹಿಳೆಯರು ಹಣ ಪಡೆದು ಫಲಾನುಭವಿಗಳಾಗಿದ್ದಾರೆ. ಜಿಲ್ಲೆಯ ರೋಣ ತಾಲೂಕಿನ ಸೋಮನಕಟ್ಟಿ ಗ್ರಾಮದ ಮಹಿಳೆಯರು ತಾವು ಪಡೆದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಧಾರ್ಮಿಕ ಕಾರ್ಯಕ್ಕೆ ಸದ್ಬಳಕೆ ಮಾಡಿಕೊಂಡಿದ್ದಾರೆ.
ಸೋಮನಕಟ್ಟಿ ಶರಣಬಸವೇಶ್ವರನ ನೂತನ ರಥ ನಿರ್ಮಾಣ ಮಾಡುವ ತೀರ್ಮಾನ ಮಾಡಿದ ಹಿನ್ನೆಲೆ ಯೋಜನೆಯಿಂದ ಬಂದ ಹಣವನ್ನು ದೇಣಿಗೆ ನೀಡಿದ್ದಾರೆ. ಗ್ರಾಮದ ಸುಮಾರು 150ಕ್ಕೂ ಅಧಿಕ ಮಹಿಳೆಯರು ನೂತನ ರಥಕ್ಕೆ ಹಣ ನೀಡಿದ್ದು, ಲಕ್ಷಾಂತರ ರೂ. ಸಂಗ್ರಹವಾಗಿದೆ. ಜೊತೆಗೆ ಗ್ರಾಮದ ಎಲ್ಲಾ ಗೃಹಲಕ್ಷ್ಮಿ ಫಲಾನುಭವಿಗಳು ಒಂದು ತಿಂಗಳ ಹಣ ನೀಡುವುದಾಗಿ ತೀರ್ಮಾನಿಸಿದ್ದಾರೆ.
Teachers Day 2024: ಶಿಕ್ಷಕರ ದಿನಾಚರಣೆಯ ಹಿನ್ನೆಲೆ, ಇತಿಹಾಸ, ಪ್ರಾಮುಖ್ಯತೆ ಗೊತ್ತೇ? ಇಲ್ಲಿದೆ ವಿವರ
ಈ ಮೂಲಕ ಪಕ್ಷ, ಜಾತಿ ಮರೆತು ಒಗ್ಗಟ್ಟನ್ನು ಎತ್ತಿಹಿಡಿದಿದ್ದಾರೆ. ಅಷ್ಟಲ್ಲದೇ ಪ್ರತಿದಿನವೂ ಹತ್ತಾರು ಮಹಿಳೆಯರು ಹೆಸರು ನೋಂದಾಯಿಸುತ್ತಿದ್ದಾರೆ. ಇದರಿಂದಾಗಿ ಮಹಿಳೆಯರು ತಾವು ಪಡೆದ ಗೃಹಲಕ್ಷ್ಮಿ ಹಣ ನೀಡಿದಕ್ಕೆ ಗ್ರಾಮಸ್ಥರು ಸಂತೋಷಪಟ್ಟಿದ್ದು, ಸಿಎಂ ಸಿದ್ದರಾಮಯ್ಯ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಗೃಹಿಣಿಯರು ಖುಷಿಯನ್ನು ವ್ಯಕ್ತಪಡಿಸಿದ್ದಾರೆ.