ಬೆಂಗಳೂರು:- ರಾಜ್ಯ ನಾಯಕರ ಡಿನ್ನರ್ ಮೀಟಿಂಗ್ ಗೆ ವಿಶೇಷ ಅರ್ಥ ಕಲ್ಪಿಸೋದು ಬೇಡ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ವಿಶೇಷ ಸಂದರ್ಭಗಳಲ್ಲಿ ಸಚಿವರು, ನಾಯಕರು ಒಟ್ಟಿಗೆ ಸೇರಿ ಔತಣಕೂಟ ನಡೆಸುವುದು ಸಾಮಾನ್ಯ. ಇದಕ್ಕೆ ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.
ಡಿಸಿಎಂ ಅನುಪಸ್ಥಿತಿಯಲ್ಲಿ ಅನೇಕ ಡಿನ್ನರ್ ಸಭೆಗಳು ನಡೆಯುತ್ತಿವೆ ಅಂತೇನಿಲ್ಲ. ವಿಶೇಷ ಸಂದರ್ಭಗಳಲ್ಲಿ ಸ್ನೇಹಿತರು ಊಟಕ್ಕೆ ಸೇರುವುದು, ಹೀಗೆ ಊಟಕ್ಕೆ ಸೇರಿದಾಗ ಹಲವಾರು ಚರ್ಚೆ ಮಾಡುವುದು ಸರ್ವೇ ಸಾಮಾನ್ಯ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೆಲವು ಸಚಿವರು, ನಾಯಕರು ಔತಣಕೂಟಕ್ಕೆ ಸೇರಿದ್ದರು. ಅದರಲ್ಲಿ ಮುಖ್ಯಮಂತ್ರಿಗಳು ಸೇರಿದ್ದಾರೆ. ಇದಕ್ಕೆ ಯಾವುದೇ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ರಾಜಕಾರಣದಲ್ಲಿ ಮಾಧ್ಯಮಗಳು ಹೇಳುವ ರೀತಿ ವಿಶೇಷ ಬದಲಾವಣೆಗೆ ಒತ್ತಡ ಹಾಕಲಾಗುತ್ತಿದೆ ಎಂದು ಅರ್ಥ ಕಲ್ಪಿಸಲು ಸಾಧ್ಯವಿಲ್ಲ ಎಂದರು.