ಉಡುಪಿ:- ಕೋಟಗೆ ಹಿಂದಿ, ಇಂಗ್ಲಿಷ್ ಬರೋಲ್ಲ ಗೆಲ್ಲಿಸಬೇಡಿ ಎಂದು ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಸಂಸದರಾದವರು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳ ಜೊತೆ ವೈಯಕ್ತಿಕವಾಗಿ ಮಾತನಾಡಬೇಕಾಗುತ್ತದೆ. ಹಿಂದಿ ಅಥವಾ ಇಂಗ್ಲಿಷ್ ಬರದೇ ಲೋಕಸಭೆಯಲ್ಲಿ ವ್ಯವಹಾರ ಕಷ್ಟ ಸಾಧ್ಯ. ಕಚೇರಿ ವ್ಯವಹಾರಗಳಲ್ಲಿ ಸಮಸ್ಯೆಯಾಗುತ್ತದೆ. ಭಾಷಾಂತರಕಾರರಿಗೆ ಅವಕಾಶ ಇರಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ
ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕನ್ನಡ ಬಿಟ್ಟರೇ ಹಿಂದಿ ಅಥವಾ ಇಂಗ್ಲೀಷ್ ಬರುವುದಿಲ್ಲ. ಈ ಹಿನ್ನೆಲೆ ಯಲ್ಲಿ ಹೆಗ್ಡೆ ಅವರು ಬ್ರಹ್ಮಾವರದ ಚುನಾವಣಾ ಸಭೆಯಲ್ಲಿ ಮಾತನಾಡಿ, ಕೋಟ ಅವರಿಗೆ ಹಿಂದಿ ಅಥವಾ ಇಂಗ್ಲಿಷ್ ಬರುವುದಿಲ್ಲ, ಅವರನ್ನು ಆಯ್ಕೆ ಮಾಡಿದರೆ ದೆಹಲಿಯಲ್ಲಿ ಕೆಲಸಗಳಾಗುವುದಿಲ್ಲ ಎಂದು ಹೇಳಿರುವ ವೀಡಿಯೋ ವೈರಲ್ ಆಗಿದೆ. ಲೋಕಸಭೆಯಲ್ಲಿ ಈ ಹಿಂದೆ ನಾನು ಕನ್ನಡದಲ್ಲಿ ಭಾಷಣ ಮಾಡುತ್ತೇನೆ ಎಂದು ಹೇಳಿದೆ, ಆಗ ಯಾರು ನಿಮ್ಮ ಕನ್ನಡ ಭಾಷಣವನ್ನು ಕೇಳುವುದಿಲ್ಲ, ಹಿಂದಿ ಅಥವಾ ಇಂಗ್ಲಿಷಿನಲ್ಲಿ ಮಾತನಾಡಿದರೆ ಸಂಸದರು ಕೇಳುತ್ತಾರೆ ಎಂದು ಹೇಳಿದ್ದರು ಎಂದು ಹೆಗ್ಡೆ ತಮಗಾಗಿದ್ದ ಅನುಭವವನ್ನು ಸ್ಮರಿಸಿದ್ದಾರೆ.