ಸೋಮವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಮತ್ತೊಂದು ಕೆಟ್ಟ ಅನುಭವ ಕಂಡುಬಂತು. ಆದರೆ, ಈ ಸಂದರ್ಭ ಎಂಐ ಮಾಜಿ ನಾಯಕ ರೋಹಿತ್ ಶರ್ಮಾ ಈರೀತಿ ಮಾಡದಂತೆ ಅಭಿಮಾನಿಗಳನ್ನು ಕೇಳಿಕೊಂಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿವೆ.
ಬೆಳಗ್ಗಿನ ಉಪಹಾರ ಸೇವಿಸ್ತಿಲ್ವಾ!? – ಹುಷಾರ್, ಹೃದಯಾಘಾತಕ್ಕೆ ಕಾರಣವಾಗಬಹುದು!
ಮುಂಬೈ ಫೀಲ್ಡಿಂಗ್ ಮಾಡುತ್ತಿರುವ ಸಂದರ್ಭ ಅಭಿಮಾನಿಗಳು ಹಾರ್ದಿಕ್ ಪಾಂಡ್ಯ ಅವರನ್ನು ಬೊಬ್ಬೆ ಹೊಡೆದು ಗೇಲಿ ಮಾಡುತ್ತಿದ್ದರು. ಆಗ ರೋಹಿತ್ ಬೊಬ್ಬೆ ಹೊಡೆಯವುದನ್ನು ನಿಲ್ಲಿಸುವಂತೆ ಅಭಿಮಾನಿಗಳ ಬಳಿ ಹೇಳಿದ್ದಾರೆ. ಬೌಂಡರಿ ಲೈನ್ನಲ್ಲಿ ಫೀಲ್ಡಿಂಗ್ ಮಾಡುತ್ತಿರುವಾಗ ಕೈಸನ್ನೆ ಮೂಲಕ ಹಾರ್ದಿಕ್ ವಿರುದ್ಧ ಗೇಲಿ ಮಾಡುವುದನ್ನು ನಿಲ್ಲಿಸುವಂತೆ ಹೇಳಿದರು.
https://x.com/theprayagtiwari/status/1774848206473678950?s=20
ಇನ್ನೂ ವೇಗಿ ಟ್ರೆಂಟ್ ಬೌಲ್ಟ್ ಅವರ ಡೈನಾಮಿಕ್ ಸ್ಪೆಲ್ ಮತ್ತು ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಅವರ ಸ್ಪಿನ್ ಬೌಲಿಂಗ್ನಿಂದ ರಾಜಸ್ಥಾನ್ ರಾಯಲ್ಸ್ ತಂಡವು ಆತಿಥೇಯ ಮುಂಬೈ ಇಂಡಿಯನ್ಸ್ ವಿರುದ್ಧ ಐಪಿಎಲ್ನ ವಾಂಖೆಡೆ ಸ್ಟೇಡಿಯಂನಲ್ಲಿ ಆರು ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.
![](https://ainlivenews.com/wp-content/uploads/2024/01/Ad-Banner-copy-scaled.jpg)