ಬೆಂಗಳೂರು: ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ನೀಡಬೇಡಿ. ವ್ಯಕ್ತಿಗತವಾಗಿ ಯಾರ ಬಗ್ಗೆಯೂ ಟೀಕೆ ಬೇಡ ಅಂತಾ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ (Renukacharya) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ತಾಕೀತು ಮಾಡಿದ್ದಾರೆ.
ಇಂದು ವಿಜಯೇಂದ್ರ ಅವರನ್ನು ರೇಣುಕಾಚಾರ್ಯ ಬಿಜೆಪಿ ಕಚೇರಿಯಲ್ಲಿ (BJP Office) ಭೇಟಿ ಮಾಡಿದ್ದರು. ಈ ವೇಳೆ ಮಾಧ್ಯಮಗಳಲ್ಲಿ ಮಾತಾಡಿ ಗೊಂದಲ ಮೂಡಿಸದಂತೆ ಬಿಜೆಪಿ ರಾಜ್ಯಾಧ್ಯಕ್ಷ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾತಾಡದೇ ರೇಣುಕಾಚಾರ್ಯ ಅವರು ಬಿಜೆಪಿ ಕಚೇರಿಯಿಂದ ಹೊರಟಿದ್ದಾರೆ. ಈ ವೇಳೆ ಏನೂ ಮಾತಾಡದಂತೆ ಸೂಚಿಸಿದ್ದಾರೆ ಎಂದು ಹೇಳಿ ಹೋಗಿದ್ದಾರೆ.
ಈ ಹಿಂದೆ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹಾಗೂ ಮಾಜಿ ಸಚಿವ ವಿ.ಸೋಮಣ್ಣ (V Somanna) ಸೇರಿದಂತೆ ಕೆಲ ನಾಯಕರ ವಿರುದ್ಧ ರೇಣುಕಾಚಾರ್ಯ ಬಹಿರಂಗ ಹೇಳಿಕೆ ನೀಡುತ್ತಿದ್ದರು. ರೇಣುಕಾಚಾರ್ಯ ಹೇಳಿಕೆಗಳಿಂದ ಕೆಲ ಅಸಮಾಧಾನಿತರು ಕೆರಳಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಗೆ ಕರೆದು ಇಂದು ಬಿವೈ ವಿಜಯೇಂದ್ರ ತಿಳಿ ಹೇಳಿದ್ದಾರೆ ಎನ್ನಲಾಗಿದೆ.