ಬೆಂಗಳೂರು: ಶಿವಾಜಿನಗರದ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರಿ ಹೆಸರಿಡುವಂತೆ ಮನವಿ ಸಲ್ಲಿಕೆಗೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರೋಧ ವ್ಯಕ್ತಪಡಿಸಿದ್ದಾರೆ.
ಪೋಸ್ಟ್ನಲ್ಲಿ ಏನಿದೆ?
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ವಿರೋಧ ವ್ಯಕ್ತಪಡಿಸಿದ ಅವರು, ಒಂದು ಸಂಸ್ಕೃತಿಯನ್ನು ಹೇಗೆ ನಾಶ ಮಾಡಬಹುದು ಎಂಬುದಕ್ಕೆ ಇದೆ ಉದಾಹರಣೆಯಾಗಿದೆ. ಹಿಂದೂಗಳ ಆರಾಧ್ಯದೈವ, ಔರಂಗಜೇಬನ ಹುಟ್ಟಡಗಿಸಿದ ಗಂಡುಗಲಿ, ಮಹಾಪರಾಕ್ರಮಿ ಶಿವಾಜಿ ಮಹಾರಾಜರು ತಮ್ಮ ಬಾಲ್ಯವನ್ನು ಕಳೆದಂತ ಶಿವಾಜಿನಗರದ ಮೆಟ್ರೋಗೆ ಸಂತ ಮೇರಿ ಹೆಸರನ್ನು ಇಡಬೇಕಂತೆ
ಇತಿಹಾಸವನ್ನು ಅರಿಯದ ಮೂಢರಷ್ಟೇ ಈ ರೀತಿ ಸಲಹೆ ಕೊಡಬಲ್ಲರು. 150 ವರ್ಷಗಳ ಇತಿಹಾಸವಿರುವ ಏಕಾಂಬರೇಶ್ವರ ಸ್ವಾಮಿಯ ದೇವಸ್ಥಾನ, ಮುತ್ಯಾಲಮ್ಮ ದೇವಸ್ಥಾನ, ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನ, ಅಂಗಾಲ ಪರಮೇಶ್ವರಿ ಅಮ್ಮನವರ ದೇವಸ್ಥಾನಗಳು ಶಿವಾಜಿನಗರದಲ್ಲಿದೆ.
ಓಲೈಕೆ ರಾಜಕಾರಣಕ್ಕೆ, ಹೆಚ್ಚು ವೋಟು ಬೀಳುತ್ತಿರುವ ಸಮುದಾಯವನ್ನು ಸಂತುಷ್ಟಗೊಳಿಸಲು ಈ ರೀತಿ ವ್ಯರ್ಥ ಪ್ರಯತ್ನಗಳು ಬೇಕಾಗಿಲ್ಲ. ನಮ್ಮ ಸಂಸ್ಕೃತಿ, ಪರಂಪರೆ, ಧರ್ಮದ ಹೆಸರನ್ನು ಉಳಿಸಿದವರನ್ನೆಲ್ಲ ಬಿಟ್ಟು, ರಾಜಕೀಯ ಕಾರಣಕ್ಕಾಗಿ ಮೇರಿಯಮ್ಮನ ಹೆಸರು ನಾಮಕರಣ ಮಾಡುವ ಅವಶ್ಯಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.