ನವದೆಹಲಿ: ವಿದೇಶಗಳಲ್ಲಿ ಮದುವೆ ಸಮಾರಂಭಗಳನ್ನು ಆಯೋಜಿಸಬೇಡಿ ಎಂದು ಭಾರತೀಯ ಜೋಡಿಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸಲಹೆ ನೀಡಿದ್ದಾರೆ. ಮನ್ ಕಿ ಬಾತ್ (Mann Ki Baat) ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ, ಮದುವೆಗಳಿಗೆ ಶಾಪಿಂಗ್ ಮಾಡುವಾಗ,
ಜನರು ಭಾರತದಲ್ಲಿ ತಯಾರಿಸಿದ ಉತ್ಪನ್ನಗಳಿಗೆ ಮಾತ್ರ ಪ್ರಾಮುಖ್ಯತೆ ನೀಡಬೇಕು ಎಂದು ಒತ್ತಿ ಹೇಳಿದ್ದಾರೆ. ಶ್ರೀಮಂತ ಕುಟುಂಬಗಳು ವಿದೇಶದಲ್ಲಿ ಮದುವೆಗಳನ್ನು ನಡೆಸುವ ಪ್ರವೃತ್ತಿಯಿಂದ ದೇಶಕ್ಕೆ ತುಂಬಾ ಸಮಸ್ಯೆಯಾಗುತ್ತಿದೆ. ದೇಶದ ಹಣ ಹೊರಗಡೆ ಹೋಗದಂತೆ ಭಾರತದ ನೆಲದಲ್ಲಿ ಇಂತಹ ಸಮಾರಂಭಗಳನ್ನು ನಡೆಸುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ.
Most Visited Websites: ಭಾರತೀಯರು ಅತಿ ಹೆಚ್ಚು ಭೇಟಿ ನೀಡಿದ ವೆಬ್ ಸೈಟ್ಗಳು ಯಾವುದು ಗೊತ್ತಾ?
ಈಗ ಮದುವೆ ಸೀಸನ್ ಕೂಡ ಶುರುವಾಗಿದೆ. ಈ ಮದುವೆ ಸೀಸನ್ನಲ್ಲಿ ಸುಮಾರು 5 ಲಕ್ಷ ಕೋಟಿ ರೂ. ವ್ಯಾಪಾರ ಆಗಬಹುದು ಎಂದು ಕೆಲವು ವ್ಯಾಪಾರ ಸಂಸ್ಥೆಗಳು ಅಂದಾಜಿಸುತ್ತವೆ. ಮದುವೆಗೆ ಶಾಪಿಂಗ್ ಮಾಡುವಾಗ ನೀವೆಲ್ಲರೂ ಭಾರತದಲ್ಲಿ ತಯಾರಾದ ಉತ್ಪನ್ನಗಳಿಗೆ ಮಾತ್ರ ಪ್ರಾಮುಖ್ಯತೆ ನೀಡಬೇಕು ಎಂದು ತಿಳಿಸಿದ್ದಾರೆ.
ಹೌದು, ಮದುವೆಯ ವಿಷಯ ಬಂದಾಗಿನಿಂದ ಒಂದು ವಿಷಯವು ನನ್ನನ್ನು ಬಹಳ ಸಮಯದಿಂದ ಕಾಡುತ್ತಿದೆ. ಮನಸ್ಸಿನ ನೋವನ್ನು ನನ್ನ ಕುಟುಂಬದವರನ್ನು ಬಿಟ್ಟು ಬೇರೆ ಯಾರ ಹತ್ತಿರ ಹೇಳಿಕೊಳ್ಳಲಿ? ಸುಮ್ಮನೆ ಯೋಚಿಸಿ.. ಇತ್ತೀಚಿನ ದಿನಗಳಲ್ಲಿ ಕೆಲವು ಕುಟುಂಬಗಳು ವಿದೇಶಕ್ಕೆ ಹೋಗಿ ಮದುವೆಗಳನ್ನು ನಡೆಸುವ ಹೊಸ ಪರಿಪಾಠ ಶುರುಮಾಡಿಕೊಂಡಿವೆ. ಇದು ಅಗತ್ಯವೇ ಎಂದು ಪ್ರಶ್ನಿಸಿದ್ದಾರೆ.