ಹೊನ್ನಾಳಿ : ಮುಂದಿನ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಜಾಬ್ ನಿಷೇಧ ಹಿಂಪಡೆವ ಹೇಳಿಕೆ ನೀಡಿ ಮುಸ್ಲಿಂ ತುಷ್ಟೀಕರಣಕ್ಕೆ ಮುಂದಾಗಿದ್ದಾರೆ. ಇದರಿಂದ ರಾಜ್ಯದಲ್ಲಿ ಕೋಮು ಸಂಘರ್ಷಕ್ಕೆ ಎಡೆ ಮಾಡುಕೊಡುತ್ತಿದ್ದಾರೆ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಎಲ್ಲರೂ ಸಮವಸ್ತ್ರ ಧರಿಸಬೇಕೆಂದು ಆದೇಶ ಹೊರಡಿಸಿತ್ತು, ಈ ಆದೇಶದ ವಿರುದ್ದವಾಗಿ ಕೆಲವರು ಕೋರ್ಟಿಗೆ ಹೋದಾಗಲೂ ಸರ್ಕಾರದ ಆದೇಶ ಎತ್ತಿ ಹಿಡಿಯಲಾಯಿತು. ಮತ್ತೆ ಕೆಲವರು ಸುಪ್ರಿಂಕೋರ್ಟಿಗೆ ಹೋಗಿದ್ದಾರೆ. ಇಂತಹ ಸಮಯದಲ್ಲಿ ಮುಖ್ಯಮಂತ್ರಿ ಹಿಜಾಬ್ ನಿಷೇಧ ಹಿಂತೆಗೆತ ಮಾತನಾಡಿರುವುದು ನ್ಯಾಯಾಂಗ ಆದೇಶ ಉಲ್ಲಂಘನೆ ಅಲ್ಲವೆ ಎಂದು ಪ್ರಶ್ನಿಸಿದರು.
ಹೆಚ್ಚುತ್ತಲೇ ಇದೆ PM ಮೋದಿ ಕ್ರೇಜ್ – 2 ಕೋಟಿ ಚಂದಾದಾರರ ಸಂಖ್ಯೆ ದಾಟಿತು ಯೂಟ್ಯೂಬ್ ಚಾನೆಲ್
ಅವರು ಹಿಜಾಬ್ ಧರಿಸಿ ಕಾಲೇಜಿಗೆ ಹೋಗಿ ಎಂದರೆ ನಾವೂ ಸಹ ಕೇಸರಿ ಶಾಲು ಧರಿಸಿ ಕಾಲೇಜಿಗೆ ಹೋಗುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಬೇಕಾಗುತ್ತದೆ. ಆಗ ಕೋಮು ಸಂಘರ್ಷಕ್ಕೆ ದಾರಿಯಾಗಬಹುದು ಎಂದು ಎಚ್ಚರಿಸಿದರು. ಮೌಲ್ವಿಗಳ ಸಭೆಗೆ ಹೋಗುತ್ತಾರೆ. ಅಲ್ಲಿ 10 ಸಾವಿರ ಕೋಟಿ ಕೊಡುತ್ತೇವೆ ಎಂದು ಭರವಸೆ ನೀಡುತ್ತಾರೆ, ನಿಮ್ಮ ಓಟ್ ಬ್ಯಾಂಕ್ ರಾಜಕರಣಕ್ಕೆ ತೆರಿಗೆ ಹಣ ಬಳಸಿಕೊಳ್ಳಬೇಡಿ ಎಂದು ಸಿದ್ದರಾಮಯ್ಯಗೆ ಮನವಿ ಮಾಡಿದರು.