ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೇಪಾಳ ಮೂಲದ ಇಬ್ಬರು ಸೆಕ್ಯೂರಿಟಿ ಗಾರ್ಡ್ ಗಳ ಮರ್ಡರ್ ಆಗಿರುವ ಘಟನೆ ಯಲಹಂಕ ನ್ಯೂಟೌನ್ ಬಳಿಯ ಬಯಲು ಬಸವೇಶ್ವರ ದೇವಸ್ಥಾನದ ಬಳಿ ನಡೆದಿದೆ. ವಿಕ್ರಂ, ತೂರಿ ಕೊಲೆಯಾದ ಸೆಕ್ಯೂರಿಟಿ ಗಾರ್ಡ್ ಗಳಾಗಿದ್ದು, ಫ್ಯಾಕ್ಟರಿ ಖಾಲಿ ಇದ್ದು, ಅದನ್ನು ವಿಕ್ರಂ ಮತ್ತು ಸೂರಿ ಕಾಯುತ್ತಿದ್ದರು. ನಿನ್ನೆ ರಾತ್ರಿ ಇಬ್ಬರೂ ತಮ್ಮ ಪರಿಯಸ್ಥರೊಂದಿಗೆ ಪಾರ್ಟಿ ಮಾಡಿದ್ದಾರೆ.
ಪಿರಿಯಡ್ಸ್ ಸಮಯದಲ್ಲಿ ಮಹಿಳೆಯರಿಗೆ ಸೆಕ್ಸ್ ಬಯಕೆ ಹೆಚ್ಚಾಗಲು ಕಾರಣವೇನು ಗೊತ್ತಾ..?
ರಾತ್ರಿ 7 ಗಂಟೆಯಿಂದ ಪಾರ್ಟಿ ನಡೆದಿದ್ದು, ಈ ವೇಳೆ ಸ್ನೇಹಿತರ ನಡುವೆ ಜಗಳವಾಗಿರುವ ಸಂಶಯವಿದೆ. ಜೊತೆಯಲ್ಲಿದ್ದವರೇ ಕಬ್ಬಿಣದ ರಾಡ್ಗಳಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇವರಿಬ್ಬರೂ ಇತ್ತೀಚೆಗೆ ಫ್ಯಾಕ್ಟರಿಯಲ್ಲಿ ಸೆಕ್ಯೂರಿಟಿ ಕೆಲಸಕ್ಕೆ ಸೇರಿದ್ದರು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಸ್ಥಳೀಯರಿಂದ ವಿಷಯ ತಿಳಿದು ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.