ದೊಡ್ಡಬಳ್ಳಾಪುರ: ವರದಕ್ಷಿಣೆ ಕಿರುಕುಳಕ್ಕೆ 6 ತಿಂಗಳ ತುಂಬು ಗರ್ಭಿಣಿ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರದ ಗುಮ್ಮನಹಳ್ಳಿಯಲ್ಲಿ ನಡೆದಿದೆ. ರೂಪ (29) ಮೃತ ದುರ್ದೈವಿಯಾಗಿದ್ದು, ಎರಡು ವರ್ಷಗಳ ಹಿಂದೆ ಪ್ರೀತಿಸಿ ಸುರೇಶ್ ನೊಂದಿಗೆ ಮದುವೆಯಾಗಿದ್ದಳು. ಸುರೇಶ್ ಸಾಸಲು ಪಂಚಾಯಿತಿಯಲ್ಲಿ ಡಾಟಾ ಎಂಟ್ರಿ ಆಪರೇಟಿಂಗ್ ಆಗಿ ಕೆಲಸ ಮಾಡುತ್ತಿದ್ದನು. ಸುರೇಶ್ ಕುಟುಂಬಸ್ಥರು ಮದುವೆಗೆ ಲಕ್ಷಾಂತರ ಹಣ ಖರ್ಚು ಮಾಡಿದ್ದೇವೆ ಆ ಹಣವನ್ನು ತೆಗೆದುಕೊಂಡು ಬಾ ಎಂದು ಕಿರುಕುಳ ಕಿರಿಕುಳ ನೀಡುತ್ತಿದ್ದರು.
ಸಾರ್ವಜನಿಕರೇ ಗಮನಿಸಿ.. ನಿಮ್ಮ ಬಳಿ 500 ರೂಪಾಯಿ ನೋಟು ಇದ್ಯಾ..? ಕ್ಷಣಮಾತ್ರದಲ್ಲಿ ನೀವು ಆಗ್ಬೋದು ಮಿಲಿಯನೇರ್!
ಕಿರುಕುಳಕ್ಕೆ ಬೇಸತ್ತ ರೂಪಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಲ್ಲದೇ ಸಾವಿಗೂ ಮುನ್ನ ರೂಪಾ ಡೆತ್ ನೋಟ್ ಬರೆದಿಟ್ಟು, ಅದರಲ್ಲಿ ನನ್ನ ಸಾವಿಗೆ ಗಂಡ ಸುರೇಶ್, ಮಾವ ನರಸಿಂಹಮೂರ್ತಿ ಅತ್ತೆ ದೇವಮ್ಮ ಕಾರಣ ಎಂದು ಬರೆದಿದ್ದಾರೆ. ಸದ್ಯ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಆರೋಪಿ ಸುರೇಶ್ನನ್ನು ವಶಕ್ಕೆ ಪಡೆದಿರುವ ಪೊಲೀಸರು ತಲೆಮರಿಸಿಕೊಂಡಿರುವ ಸುರೇಶ್ ತಂದೆ ತಾಯಿಗಾಗಿ ಶೋಧ ನಡೆಸುತ್ತಿದ್ದಾರೆ.