ನವದೆಹಲಿ: ರಾಜ್ಯಸಭೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಂಬೇಡ್ಕರ್ ಜಪ ಪಠಿಸುವುದು ಫ್ಯಾಶನ್ ಆಗಿಬಿಟ್ಟಿದೆ. ಈ ರೀತಿ 100 ಬಾರಿ ಅಂಬೇಡ್ಕರ್ ಹೆಸರು ಹೇಳುವ ಬದಲು ದೇವರ ನಾಮವನ್ನಾದರೂ ಪಠಿಸಿದ್ದರೆ ಏಳೇಳು ಜನ್ಮದಲ್ಲೂ ಸ್ವರ್ಗಕ್ಕೆ ಹೋಗುತ್ತಿದ್ದಿರಿ ಎಂದು ವ್ಯಂಗ್ಯವಾಡಿದ್ದರು. ಇದಕ್ಕೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿ, ಅಂಬೇಡ್ಕರ್ ಕುರಿತು ಅವಮಾನಕಾರಿಯಾಗಿ ಮಾತನಾಡಿದ ಅಮಿತ್ ಶಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.
ಇದರ ಬೆನ್ನಲ್ಲೇ “ಡಾ.ಅಂಬೇಡ್ಕರ್ ಸಮ್ಮಾನ್” ವಿದ್ಯಾರ್ಥಿ ವೇತನವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಗೆದ್ದರೆ ವಿದೇಶಿ ವಿಶ್ವವಿದ್ಯಾಲಯಗಳಿಗೆ ಪ್ರವೇಶ ಪಡೆದ ದಲಿತ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರ ಧನಸಹಾಯ ನೀಡಲಿದೆ. ದೆಹಲಿಯ ಯಾವುದೇ ದಲಿತ ವಿದ್ಯಾರ್ಥಿಯು ಹಣದ ಕೊರತೆಯಿಂದಾಗಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ತಮ್ಮ ಅಧ್ಯಯನವನ್ನು ತ್ಯಜಿಸಬಾರದು ಎಂದು ಕೇಜ್ರಿವಾಲ್ ತಮ್ಮ ಪ್ರಚಾರದಲ್ಲಿ ತಿಳಿಸಿದರು.
PM Kisan: ಪಿಎಂ ಕಿಸಾನ್ 19ನೇ ಕಂತಿನ ಹಣ ರೈತರ ಖಾತೆಗೆ ಬರೋದು ಯಾವಾಗ ಗೊತ್ತಾ..? ಇಲ್ಲಿದೆ ಉತ್ತರ
ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಅ್ಯಂಡ್ ಪೊಲಿಟಿಕಲ್ ಸೈನ್ಸ್ನಲ್ಲಿ ಓದುವಾಗ ಹಣದ ಕೊರತೆಯಿಂದ ತಮ್ಮ ಶಿಕ್ಷಣವನ್ನು ಮಧ್ಯದಲ್ಲಿ ನಿಲ್ಲಿಸಬೇಕಾಯಿತು. ಅವರು ಮನೆಗೆ ಹಿಂದಿರುಗಿ ಹಣದ ವ್ಯವಸ್ಥೆ ಮಾಡಿಕೊಂಡು ಹಿಂತಿರುಗಿ ಅವರ ಶಿಕ್ಷಣವನ್ನು ಪೂರ್ಣಗೊಳಿಸಿದರು ಎಂದರು.
ಅಮಿತ್ ಶಾ ಅವರು ಅಂಬೇಡ್ಕರ್ ಅವರನ್ನು ಅಪಹಾಸ್ಯ ಮಾಡುತ್ತಿದ್ದಾರೆ. ಅವರ ಹೇಳಿಕೆಯಿಂದ ನನಗೂ ಸೇರಿ ಕೋಟ್ಯಂತರ ಅನುಯಾಯಿಗಳಿಗೆ ನೋವಾಗಿದೆ. ಸ್ವತಂತ್ರ ಭಾರತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಯಾರಾದರೂ ಸಂಸತ್ತಿನಲ್ಲಿ ಅಪಹಾಸ್ಯ ಮಾಡುತ್ತಾರೆಂದು ಯಾರೂ ಊಹಿಸಿರಲಿಲ್ಲ. ಅಮಿತ್ ಶಾ ಅವರ ಅಗೌರವದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ನಾನು ಈ ಘೋಷಣೆ ಮಾಡುತ್ತಿದ್ದೇನೆ. ಯೋಜನೆಯಲ್ಲಿ ಸರ್ಕಾರಿ ನೌಕರರ ಮಕ್ಕಳನ್ನೂ ಸೇರಿಸಲಾಗುವುದು ಎಂದು ತಿಳಿಸಿದರು.