ಬೆಂಗಳೂರು ;- ಮಾಜಿ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ್ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ಹೊರ ಹಾಕಿದೆ. ಡಿ.ಕೆ ಶಿವಕುಮಾರ್ ಹಾಗೂ ಬೆಂಗಳೂರಿಗೂ ಏನು ಸಂಬಂಧ? ಎಂದಿರುವ ಮಾಜಿ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣಗೆ ಕಾಂಗ್ರೆಸ್ ಟಾಂಗ್ ಕೊಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಡಿ.ಕೆ ಶಿವಕುಮಾರ್ ಅವರಿಗೂ ಬೆಂಗಳೂರಿಗೂ ಏನು ಸಂಬಂಧ ಎಂದಿರುವ ಅಶ್ವತ್ಥನಾರಾಯಣ ಅವರೇ, ಇಂತಹ ದುರಹಂಕಾರಕಾಗಿಯೇ ರಾಜ್ಯದ ಜನ ನಿಮಗೆ ಮನೆಯ ದಾರಿ ತೋರಿಸಿದ್ದಾರೆ ಎಂದು ಕುಟುಕಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಈ ರಾಜ್ಯದ ಸಚಿವರು ಹಾಗೂ ಉಪಮುಖ್ಯಮಂತ್ರಿ. ಬೆಂಗಳೂರು ಅವರ ಕರ್ಮಭೂಮಿ. ಅಶ್ವತ್ಥನಾರಾಯಣ ಅವರೇ, ನಿಮಗೂ ನಮಗೂ ಸಂಬಂಧವಿಲ್ಲ ಅಂತ ರಾಜ್ಯದ ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಛೇಡಿಸಿದೆ.
