ಬೆಂಗಳೂರು: ಗ್ರಾಮಂತರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ ಸಿ ಎನ್ ಮಂಜುನಾಥ್ ಸ್ಪರ್ಧೆ ವಿಚಾರ ಸಂಬಂಧಿಸಿದಂತೆ ಡಿಕೆಶಿ ನಿವಾಸದಲ್ಲಿ ಕೈ ನಾಯಕರ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆದಿದೆ.
ಸದಾಶಿವ ನಗರ ನಿವಾಸದಲ್ಲಿ ಬೆಂಗಳೂರು ಗ್ರಾಮಂತರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ ಸಿ ಎನ್ ಮಂಜುನಾಥ್ ಸ್ಪರ್ಧೆ ವಿಚಾರಕ್ಕೆ ಸದಾಶಿವ ನಗರ ನಿವಾಸದಲ್ಲಿ ಕೈ ನಾಯಕರ ಬ್ರೇಕ್ ಫಾಸ್ಟ್ ಮೀಟಿಂಗ್
ಡಿಸಿಎಂ ಡಿ ಕೆ ಶಿವಕುಮಾರ್, ಸಂಸದ ಡಿ ಕೆ ಸುರೇಶ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರ ಜತೆ ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಉಪಾಹಾರ ಸಭೆ ನಡೆಸಿದರು.
ಶಾಸಕರಾದ ಮಾಗಡಿ ಬಾಲಕೃಷ್ಣ, ಆನೇಕಲ್ ಶಿವಣ್ಣ, ಕುಣಿಗಲ್ ರಂಗನಾಥ್, ಎಂಎಲ್ಸಿಗಳಾದ ಪುಟ್ಟಣ್ಣ, ಎಸ್ ರವಿ, ಮುಖಂಡರಾದ ರಘುನಂದನ್ ರಾಮಣ್ಣ, ಮನೋಹರ್, ಹನುಮಂತರಾಯಪ್ಪ, ಕುಸುಮ ಎಚ್, ಗಂಗಾಧರ್ ಮತ್ತಿತರರು ಭಾಗವಹಿಸಿದ್ದರು.