ನವದೆಹಲಿ:- ಕೇಂದ್ರದಿಂದ ಡಾ. ಮನಮೋಹನ್ ಸಿಂಗ್ ಗೆ ಅವಮಾನ ಮಾಡಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಬೋಧ್ ಘಾಟ್ನಲ್ಲಿಂದು ಅಂತ್ಯಕ್ರಿಯೆ ನೆರವೇರಿದ ಬಳಿಕ ಕೆರಳಿ ಕೆಂಡವಾದ ರಾಹುಲ್ ಗಾಂಧಿ ನಿಗಮ್ ಬೋಧ್ ಘಾಟ್ನಲ್ಲಿ ಅಂತ್ಯಕ್ರಿಯೆ ಮಾಡುವ ಮೂಲಕ ಮನಮೋಹನ್ ಸಿಂಗ್ ಅವರಿಗೆ ಬಿಜೆಪಿ ಅವಮಾನ ಮಾಡಿದೆ ಅಂತ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಮನಮೋಹನ್ ಸಿಂಗ್ ಒಂದು ದಶಕದ ಕಾಲ ಭಾರತದ ಪ್ರಧಾನಿಯಾಗಿದ್ದರು. ಅವರ ಅಧಿಕಾರಾವಧಿಯಲ್ಲಿ ದೇಶವು ಆರ್ಥಿಕ ಮಹಾಶಕ್ತಿಯಾಯಿತು ಮತ್ತು ಅವರ ನೀತಿಗಳು ಇನ್ನೂ ದೇಶದ ಬಡ ಮತ್ತು ಹಿಂದುಳಿದ ವರ್ಗಗಳಿಗೆ ಬೆಂಬಲ ನೀಡುತ್ತಿವೆ.
ಇಲ್ಲಿಯವರೆಗೆ, ಎಲ್ಲಾ ಮಾಜಿ ಪ್ರಧಾನಿಗಳ ಘನತೆಯನ್ನು ಗೌರವಿಸಿ, ಅವರ ಅಂತಿಮ ವಿಧಿಗಳನ್ನು ಅಧಿಕೃತ ಸಮಾಧಿಗಳಲ್ಲಿ ನಡೆಸಲಾಯಿತು, ಇದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಯಾವುದೇ ಅನಾನುಕೂಲತೆ ಇಲ್ಲದೇ ಗೌರವ ಸಲ್ಲಿಸಬದಾಗಿದೆ. ಹಾಗೆಯೇ ದೇಶದ ಈ ಮಹಾನ್ ಪುತ್ರ ಮತ್ತು ಅವರ ಸಮುದಾಯದ ಬಗ್ಗೆ ಸರ್ಕಾರ ಗೌರವ ತೋರಿಸಬೇಕಿತ್ತು. ಆದ್ರೆ ಸಂಪೂರ್ಣ ಅಪಮಾನ ಮಾಡಿದೆ ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.