ರಾಮನಗರ: “ದೇವೇಗೌಡರ ಅಳಿಯ ಡಾ. ಮಂಜುನಾಥ್ ಅವರೇ ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ತಮ್ಮ ಮುಂದಿನ ತೀರ್ಮಾನ ಮಾಡಬೇಕು” ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ವಿರುದ್ಧ ಡಾ. ಮಂಜುನಾಥ್ ಅವರು ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಬಗ್ಗೆ ಕೇಳಿದಾಗ ಅವರು ಪ್ರತಿಕ್ರಿಯಿಸಿದರು.
“ಡಾ. ಮಂಜುನಾಥ್ ಅವರು ರಾಜಕಾರಣಕ್ಕೆ ಬರುತ್ತಿರುವುದನ್ನು ನಾನು ಸ್ವಾಗತಿಸುತ್ತೇನೆ. ಅವರು ದೇವೇಗೌಡರ ಕುಟುಂಬದವರು. ಇದು ನನ್ನ ಹಾಗೂ ಡಿಕೆ ಶಿವಕುಮಾರ್ ಅವರ ರಾಜಕಾರಣಕ್ಕೆ ಹೊಸತೇನಲ್ಲ. ಹೀಗಾಗಿ ನಿಮ್ಮ ನೇತೃತ್ವದಲ್ಲಿ ಸ್ಪರ್ಧೆ ನಡೆಯಲಿದೆ” ಎಂದು ತಿಳಿಸಿದರು.
ಪಿಯುಸಿ ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶ.! ತಿಂಗಳಿಗೆ ₹63,000 ಸಂಬಳ! ಈಗಲೇ ಅರ್ಜಿ ಸಲ್ಲಿಸಿ
ಮಂಜುನಾಥ್ ಅವರು ಮೃದು ಸ್ವಭಾವದವರು ಎಂಬ ಚರ್ಚೆ ಬಗ್ಗೆ ಕೇಳಿದಾಗ, “ಯಾರು ಏನು ಚರ್ಚೆ ಮಾಡುತ್ತಿದ್ದಾರೆ ಎಂಬುದು ನನಗೆ ಮುಖ್ಯವಲ್ಲ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿಯಿಲ್ಲ ಎಂದು ಅವರ ಅಳಿಯ ತೀರ್ಮಾನ ಮಾಡಿರುವುದರ ಬಗ್ಗೆ ಜನತಾದಳದ ಕಾರ್ಯಕರ್ತರು ಚಿಂತನೆ ಮಾಡಬೇಕು. ದೇವೇಗೌಡರ ಬುದ್ಧಿವಂತ ಅಳಿಯನವರೇ ಬೇರೆ ಪಕ್ಷ ಆಯ್ಕೆ ಮಾಡಿಕೊಂಡ ನಂತರ ಅವರ ಕಾರ್ಯಕರ್ತರು ಉಳಿದ ವಿಚಾರ ತೀರ್ಮಾನ ಮಾಡಬೇಕು” ಎಂದು ತಿಳಿಸಿದರು.