ಬೆಂಗಳೂರು: ಖ್ಯಾತ ಹೃದಯ ತಜ್ಞ ಹಾಗೂ ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕರಾದ ಇವರು ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ವಲಯದಲ್ಲಿ ಅವರದ್ದೇ ಆದ ಜನಪ್ರಿಯತೆಯನ್ನು ಗಳಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಮೂಲಕ ಕಣಕ್ಕಿಳಿದಿದ್ದಾರೆ. ಆ ಕ್ಷೇತ್ರದ ಹಾಲಿ ಸಂಸದ, ಕಾಂಗ್ರೆಸ್ಸಿನ ಡಿ.ಕೆ. ಸುರೇಶ್ ಅವರು ಡಾ. ಮಂಜುನಾಥ್ ಅವರ ಪ್ರಬಲ ಎದುರಾಳಿಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ಮುಂದುವರಿದ್ದು, ಬಿಜೆಪಿ ಅಭ್ಯರ್ಥಿ ಸಿ.ಎನ್. ಮಂಜುನಾಥ್ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಹಿನ್ನಡೆ ಕಂಡಿದ್ದಾರೆ. ಸಿ.ಎನ್. ಮಂಜುನಾಥ್ ಮುನ್ನಡೆ 2,03,411 ಮತಗಳನ್ನು ಸಂಪಾದಿಸಿದ್ದರೆ,
FRUITS ID: ರೈತರೇ ಗಮನಿಸಿ.. ಬರ ಪರಿಹಾರ ಪಡೆಯಲು ʼʼಫ್ರೂಟ್ಸ್ ಐಡಿʼʼ ಕಡ್ಡಾಯ..!
ಡಿ.ಕೆ. ಸುರೇಶ್ 1,40,711 ಮತಗಳನ್ನು ಗಳಿಸಿದ್ದಾರೆ. 62,700 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿ ಫೈಟ್ ನಡೆಯುತ್ತಿದ್ದು, ಭಾರಿ ಮತಗಳ ಅಂತರದೊಂದಿಗೆ ಬಿಜೆಪಿ ಅಭ್ಯರ್ಥಿ ಸಿ.ಎನ್. ಮಂಜುನಾಥ್ ಮುನ್ನಡೆ ಸಾಧಿಸಿದ್ದಾರೆ.