ನವದೆಹಲಿ:- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ ಹಾಲಿ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ರೈತರಿಗೆ ಗುಡ್, ಗ್ರಾಹಕರಿಗೆ ಬ್ಯಾಡ್ ನ್ಯೂಸ್: ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ ಏರಿಕೆ!?
ಸಂತಾಪ ನುಡಿಗಳನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದರೊಂದಿಗೆ ಮನಮೋಹನ್ ಸಿಂಗ್ ಅವರೊಂದಿಗಿನ ಫೋಟೋಗಳನ್ನೂ ಹಂಚಿಕೊಂಡಿದ್ದಾರೆ.
ಡಾ.ಮನಹೋಹನ್ ಸಿಂಗ್ ಜೀ ಪ್ರಧಾನಿಯಾಗಿದ್ದಾಗ, ನಾನು ಗುಜರಾತ್ ಮುಖ್ಯಮಂತ್ರಿ ಆಗಿದ್ದೆ. ಇಬ್ಬರೂ ನಿಯಮಿತವಾಗಿ ಸಂವಹನ ನಡೆಸುತ್ತಿದ್ದೆವು. ಆಡಳಿಯಕ್ಕೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ವ್ಯಾಪಕವಾಗಿ ಚರ್ಚೆ ನಡೆಸಿದ್ದೇವೆ. ಅವರ ಬುದ್ಧಿವಂತಿಕೆ, ನಮ್ರತೆ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ. ಈ ದುಃಖದ ಸಮಯದಲ್ಲಿ ನಾನು ಮನಮೋಹನ್ ಸಿಂಗ್ ಜೀ ಅವರ ಕುಟುಂಬ ಹಾಗೂ ಅಸಂಖ್ಯಾತ ಅಭಿಮಾನಿಗಳೊಂದಿಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಈ ದಿನ ಭಾರತವು ತನ್ನ ಅತ್ಯಂತ ಪ್ರತಿಷ್ಠಿತ ನಾಯಕರಲ್ಲಿ ಒಬ್ಬರಾದ ಮನಮೋಹನ್ ಸಿಂಗ್ ಜೀ ಅವರನ್ನ ಕಳೆದುಕೊಂಡಿದೆ. ಹಣಕಾಸು ಸಚಿವರು ಸೇರಿದಂತೆ ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದರು. ಆಡಳಿತ ನಡೆಸಿದ ಕೆಲವೇ ವರ್ಷಗಳಲ್ಲಿ ಆರ್ಥಿಕತೆ ನೀತಿಯ ಮೇಲೆ ಬಲವಾದ ಮುದ್ರೆ ಒತ್ತಿದರು. ನಮ್ಮ ದೇಶದ ಪ್ರಧಾನಿಯಾಗಿ ಅವರು ಜನಜೀವನ ಸುಧಾರಣೆಗೆ ವ್ಯಾಪಕ ಕೊಡುಗೆ ನೀಡಿದ್ದಾರೆ, ಅನೇಕ ಪ್ರಯತ್ನಗಳನ್ನ ಮಾಡಿದ್ದಾರೆ ಎಂದು ಸ್ಮರಿಸಿದ್ದಾರೆ.