ಬೆಳಗಾವಿ: ಶಾಸಕ ರಮೇಶ್ ಜಾರಕಿಹೊಳಿ ಆಪ್ತ, ಬಿಜೆಪಿ ಮುಖಂಡ ಪೃಥ್ವಿಸಿಂಗ್ಗೆ ಚಾಕು ಇರಿತ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಕಾನೂನುಕ್ರಮ ಕೈಗೊಳ್ಳುತ್ತಾರೆ. ಏನೇ ಇದ್ದರೂ ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ಗೃಹ ಸಚಿವ ಡಾ.ಪರಮೇಶ್ವರ್ ಹೇಳಿದ್ದಾರೆ. ಬೆಳಗಾವಿ ಖಾಸಗಿ ಹೊಟೆಲ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ಪೃಥ್ವಿ ಸಿಂಗ್ ಹಿನ್ನೆಲೆ ಏನು, ಚಾಕು ಇರಿತ ಯಾಕಾಗಿದೆ ಅನ್ನುವುದು ತನಿಖೆ ಮೂಲಕ ಗೊತ್ತಾಗಬೇಕಿದೆ. ಈ ಕೇಸ್ನಲ್ಲಿ ಬೇರೆ ಯಾರು ಇನ್ವಾಲ್ವ್ ಆಗಿದ್ದಾರೆ ನೋಡಬೇಕು. ಕೇಸ್ ವೇರಿಫಾಯ್ ಮಾಡೊಣ. ಈಗಾಗಲೇ ಪೋಲಿಸರು ವೇರಿಫಾಯ್ ಮಾಡುತ್ತಿದ್ದಾರೆ. ಸಂಪೂರ್ಣ ಮಾಹಿತಿ ಬಂದ ಮೇಲೆ ಮಾಧ್ಯಮಕ್ಕೆ ರಿಯಾಕ್ಷನ್ ಕೊಡ್ತಿನಿ ಎಂದು ಹೇಳಿದರು.
ಇನ್ನೂ ಪೋಲಿಸರ ಮೇಲೆ ನಂಬಿಕೆ ಇಲ್ಲ ವಿಜಯೇಂದ್ರ ಹೇಳಿಕೆಗೆ ಜಿ.ಪರಮೇಶ್ವರ್ ತಿರುಗೇಟು ನೀಡಿದರು. ಪೋಲಿಸರ ಮೇಲೆ ನಂಬಿಕೆ ಇಲ್ಲದಿದ್ದರೆ ಇವರು ಯಾರ ಮೇಲೆ ನಂಬಿಕೆ ಇಡುತ್ತಾರೆ. ಅವರಿಗೆ ಬೇಕಾದಾಗ ನಂಬಿಕೆ ಇರುತ್ತೆ, ಬೇಡವಾದಾಗ ನಂಬಿಕೆ ಇರಲ್ಲ, ಎಲ್ಲರಿಗೂ ನ್ಯಾಯವನ್ನ ಒದಗಿಸುವ ಕಾರ್ಯ ಮಾಡುತ್ತಿದೆ ಅವರ ಮೇಲೆ ನಂಬಿಕೆ ಇಡಬೇಕಾಗುತ್ತದೆ ಎಂದು ಹೇಳಿದರು.