ಫೀಡಂ ಪಾರ್ಕ್ ಅವರಣದಲ್ಲಿ ಅಭಿಮಾನ್ ಸ್ಟೂಡಿಯೊದಲ್ಲಿ ಸಾಹಸಸಿಂಹ ಡಾ.ವಿಷ್ಣುವರ್ಧನ್ ಪುಣ್ಯಭೂಮಿ ಸ್ಮಾರಕ ನಿರ್ಮಾಣ ಒತ್ತಾಯಿಸಿ ಬೃಹತ್ ಪ್ರತಿಭಟನೆ. ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಟಿ.ಎ.ನಾರಾಯಣಗೌಡ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಅಶೋಕ್ ಹಾರನಹಳ್ಳಿ,
ದಲಿತ ಸಂಘರ್ಷ ಸಮಿತಿ ಅಧ್ಯಕ್ಷರಾದ ಎನ್.ಮೂರ್ತಿ, ಬಿಜೆಪಿ ಮುಖಂಡರಾದ ಭಾಸ್ಕರ್ ರಾವ್, ಮತ್ತು ವಿಷ್ಣುವರ್ಧನ್ ಅಭಿಮಾನಿ ವೀರಕಪುತ್ರ ಶ್ರೀನಿವಾಸ್, ರವಿಕೃಷ್ಣರೆಡ್ಡಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಮತ್ತು ರಾಜ್ಯದ್ಯಂತ ಇರುವ ವಿಷ್ಣುವರ್ಧನ್ ಅಭಿಮಾನಿಗಳು ಹಾಗೂ ಹಲವಾರು ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕಾಡಿನಲ್ಲಿ ಅ ಸಿಂಹ ನಾಡಿನಲ್ಲಿ ಸಾಹಸಿಸಿಂಹ ಇರಬೇಕು ಎಂದು ಅಭಿಮಾನ್ ಸ್ಟೂಡಿಯೊದಲ್ಲಿ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗಬೇಕು ಮತ್ತು ಕಳೆದ ಐದು ಮುಖ್ಯಮಂತ್ರಿಗಳ ಬಳಿ ಮನವಿ ಸಲ್ಲಿಸಲಾಗಿದೆ. ದೇಶ,ವಿದೇಶ ಮತ್ತು ನಾಡಿನಲ್ಲಿ ಕೊಟ್ಯಂತರ ಅಭಿಮಾನಿಗಳ ಹೊಂದಿರುವ ಡಾ.ವಿಷ್ಣುವರ್ಧನ್ ಅಭಿಮಾನಿಗಳಿಗೆ ನಿರಾಶೆ ಮಾಡಬೇಡಿ, ತಾಳ್ಮೆ ಪರೀಕ್ಷೆ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರು.