ರಾಜಸ್ಥಾನ ರಾಯಲ್ಸ್ (Rajasthan Royals) ತಂಡಕ್ಕೆ ರಾಹುಲ್ ದ್ರಾವಿಡ್ (Rahul Dravid) ಮರಳಿದ್ದಾರೆ. ಕಳೆದ ಕೆಲ ದಿನಗಳಿಂದ ಹರಿದಾಡುತ್ತಿದ್ದ ಸುದ್ದಿ ನಿಜವಾಗಿದ್ದು ರಾಜಸ್ಥಾನ ರಾಯಲ್ಸ್ ತಂಡದ ಮುಖ್ಯ ಕೋಚ್ (Head Coach) ಆಗಿ ದ್ರಾವಿಡ್ ನೇಮಕವಾಗಿದ್ದಾರೆ.
ರಾಹುಲ್ ದ್ರಾವಿಡ್ ಹಲವು ವರ್ಷಗಳ ಒಪ್ಪಂದಕ್ಕೆ ದ್ರಾವಿಡ್ ಸಹಿ ಹಾಕಿದ್ದಾರೆ ಎಂದು ರಾಜಸ್ಥಾನ ರಾಯಲ್ಸ್ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಆರ್ ಆರ್, ಭಾರತದ ದಂತಕಥೆ ವಿಶ್ವಕಪ್ ವಿಜೇತ ಕೋಚ್ ರಾಹುಲ್ ದ್ರಾವಿಡ್ ರಾಜಸ್ಥಾನ ರಾಯಲ್ಸ್ಗೆ ಮರಳಲು ಸಿದ್ಧರಾಗಿದ್ದಾರೆ ಎಂದು ಬರೆದುಕೊಂಡಿದೆ.
ಬೆಂಗಳೂರಿನಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ರಾಯಲ್ಸ್ ಸ್ಪೋರ್ಟ್ಸ್ ಗ್ರೂಪ್ ಸಿಇಒ ಜೇಕ್ ಲುಶ್ ಮೆಕ್ಕ್ರಂ ಅವರಿಂದ ದ್ರಾವಿಡ್ ಪಿಂಕ್ ಜೆರ್ಸಿ ಸ್ವೀಕರಿಸಿದ್ದಾರೆ.
ಆರ್ಆರ್ ತಂಡವನ್ನು ಸೇರಿದ ನಂತರ ಮಾತನಾಡಿದ ದ್ರಾವಿಡ್, ವಿಶ್ವಕಪ್ ಬಳಿಕ ಮತ್ತೊಂದು ಸವಾಲು ಸ್ವೀಕರಿಸಲು ಇದು ಸರಿಯಾದ ಸಮಯ ಎಂದು ನನಗೆ ಅನಿಸುತ್ತದೆ. ಈ ಸವಾಲು ಸ್ವೀಕಾರಕ್ಕೆ ರಾಜಸ್ಥಾನ ರಾಯಲ್ಸ್ ಸೂಕ್ತ ತಂಡ ಎಂದು ಹೇಳಿದ್ದಾರೆ.
ಟೀಂ ಇಂಡಿಯಾ (Team India) ವಿಶ್ವಕಪ್ ಗೆಲ್ಲುವುದರೊಂದಿಗೆ ದ್ರಾವಿಡ್ ಅವರ ಕೋಚ್ ಅವಧಿಯೂ ಅಂತ್ಯವಾಗಿತ್ತು. ಸದ್ಯ ದ್ರಾವಿಡ್ ಕಿರು ವಿರಾಮದಲ್ಲಿದ್ದು ಹಲವು ಐಪಿಎಲ್ (IPL) ತಂಡಗಳು ದ್ರಾವಿಡ್ ಅವರನ್ನು ಸಂಪರ್ಕಿಸಿದ್ದವು.