ಗದಗ:– ಬೇಸಿಗೆಯಲ್ಲಿ ಕುಡಿಯುವ ನೀರಿ ಸಮಸ್ಯೆ ಎದುರಾಗಲಿದೆ ಎಂದು ಗದಗದಲ್ಲಿ ಸಚಿವ ಹೆಚ್ಕೆ ಪಾಟೀಲ್ ಆತಂಕ ಹೊರ ಹಾಕಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಮುಂದಿನ ಜೂನ್, ಜುಲೈ ವರೆಗೂ ಮಳೆ ಬರುವ ಲಕ್ಷಣಗಳು ಕಡಿಮೆ ಇದೆ. ವಾಡಿಕೆ ಮಳೆಗಿಂತ ಬಹಳ ಕೊರತೆ ಇದೆ. ಹೀಗಾಗಿ ಕುಡಿಯುವ ಕೊರತೆ ಸಾಧ್ಯತೆ ಇದೆ. ಸಾರ್ವಜನಿಕರು ನೀರಿನ ಬಳಕ ವಿಚಾರ ಮಾಡಿ ಬಳಕೆ ಮಾಡಬೇಕಾದ ಮಾನಸಿಕ ಸ್ಥಿತಿಗೆ ಬರಬೇಕಿದೆ. ನೀರು ಇದ್ದರೆ ಹೇಗೆ ಬೇಕಾದರೂ ಬಳಕೆ ಮಾಡುತ್ತೇವೆ. ಆದರೆ ನೀರಿನ ಕೊರತೆ ಆಗುವ ಸಾಧ್ಯತೆ ಇರುವುದರಿಂದ ಎಲ್ಲರೂ ಮುಂಜಾಗ್ರತೆಯಿಂದ ಇರಬೇಕು ಎಂದರು.
ನೀರು ಹಾಳು ಮಾಡದೇ ಮಿತವಾಗಿ ಬಳಸಬೇಕು ಅಂತ ಜಿಲ್ಲೆಯ ಜನರಿಗೆ ಮನವಿ ಮಾಡಿದ ಹೆಚ್ಕೆ ಪಾಟೀಲ್, ಗದಗ ಜಿಲ್ಲೆಯಲ್ಲಿ ಭೀಕರ ಬರ ಹಿನ್ನೆಲೆ ಮೇವು, ನೀರಿನ ಕೊರತೆ ಆಗದಂತೆ ಎಚ್ಚರಿಕೆ ವಹಿಸುವಂತ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೇವು ಬ್ಯಾಂಕ್ ತೆರೆಯಲು ಸೂಚಿಸಿದರು.
ಈ ಬಗ್ಗೆ ನಿನ್ನೆ ಅಧಿಕಾರಿಗಳ ಸಭೆ ಮಾಡಿ ನಿರ್ದೇಶನ ನೀಡಿದ್ದೇನೆ. ಆದಷ್ಟು ಬೇಗ ಎಲ್ಲ ಪಂಚಾಯತ್ನಲ್ಲಿ ಮೇವು ಬ್ಯಾಂಕ್ ತೆರಲು ಸೂಚನೆ ನೀಡಿದ್ದೇನೆ. ಕುಡಿಯುವ ನೀರಿನ ವಿಚಾರದಲ್ಲಿ ನಮ್ಮ ಜಿಲ್ಲೆಯ ಯಾವುದೇ ಭಾಗದಲ್ಲಿ ಟ್ಯಾಂಕರ್ನಿಂದ ಪೂರೈಸುವ ಸ್ಥಿತಿ ಇಲ್ಲ. ಮೇವಿನ ಸಮ್ಯಸೆ ಇಲ್ಲ ಅನ್ನೋ ಮಾತು ಅಧಿಕಾರಿಗಳಲ್ಲಿದೆ. ಆದರೀ ಜಾನುವಾಗರಳಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾಗಿ ತಿಳಿಸಿದರು.