ನೆಲಮಂಗಲ: ಕಬ್ಬಿಣದ ಪೈಪ್ ತುಂಬಿದ ಬೃಹತ್ ಲಾರಿ ಪಲ್ಟಿ ಹೊಡೆದಿರುವ ಘಟನೆ ನೆಲಮಂಗಲ ತಾಲೂಕಿನ ಬೂದಿಹಾಳ್ ಗೇಟ್ ಬಳಿ ಜರುಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ: BSY ಕುಟುಂಬಕ್ಕೆ ಯತ್ನಾಳ್ ಟಾಂಗ್!
ಘಟನೆ ಪರಿಣಾಮ, ರಸ್ತೆಯಲ್ಲಿ ಪೈಪ್ ಗಳು ಚೆಲ್ಲಾಪಿಲ್ಲಿಯಾಗಿದೆ. ತುಮಕೂರು ಮಾರ್ಗವಾಗಿ ಲಾರಿ ಬೆಂಗಳೂರು ಕಡೆ ಬರುತ್ತಿತ್ತು. ಈ ವೇಳೆ ಲಾರಿ ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ಲಾರಿ ಪಲ್ಟಿ ಆಗಿದೆ. ಬೆಳಗ್ಗಿನ ಜಾವ ಮೂರು ಗಂಟೆಗೆ ಈ ಘಟನೆ ನಡೆದಿದೆ.
ಘಟನೆ ಪರಿಣಾಮ, ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾರಿ ಟ್ರಾಫಿಕ್ ಉಂಟಾಗಿದೆ. ನೆಲಮಂಗಲ ಸಂಚಾರಿ ಪೊಲೀಸರಿಂದ ತೆರವು ಕಾರ್ಯ ನಡೆದಿದೆ.