ಬೆಂಗಳೂರು :- ಡ್ರಂಕ್ ಆ್ಯಂಡ್ ಡ್ರೈವ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಚಾರಿ ಪೊಲೀಸರು ಆರಂಭಿಸಿದ್ದಾರೆ. ಅದರಂತೆ, ಚಾಲನಾ ಪರವಾನಗಿ ಕೂಡ ಇಲ್ಲದೆ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ವ್ಯಕ್ತಿಯೊಬ್ಬರ ವಿರುದ್ಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.
IND vs AUS: ರೋಹಿತ್ ಶರ್ಮಾ ಅಲಭ್ಯರಾದರೆ ನೆಕ್ಸ್ಟ್ ಕ್ಯಾಪ್ಟನ್ ಯಾರು!?
ಡಿಎಲ್ ಇಲ್ಲದೆ, ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಟ್ರಾಫಿಕ್ ಪೊಲೀಸರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಅದರಂತೆ, ಇದೀಗ ಮೊದಲ ಪ್ರಕರಣ ದಾಖಲಾಗಿದೆ.
53 ಸಾವಿರ ವಾಹನಗಳ ತಪಾಸಣೆ
ಕಳೆದ ವಾರ ಬೆಂಗಳೂರು ನಗರದಲ್ಲಿ ರಾತ್ರಿ ವೇಳೆ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡಲಾಗಿದೆ. ನಗರದಾದ್ಯಂತ ಸುಮಾರು 53 ಸಾವಿರ ವಾಹನಗಳನ್ನ ತಪಾಸಣೆ ಮಾಡಲಾಗಿದೆ ಎಂದು ಸಂಚಾರ ಜಂಟಿ ಪೊಲೀಸ್ ಆಯುಕ್ತ ಎಂಎನ್ ಅನುಚೇತ್ ಮಾಹಿತಿ ನೀಡಿದ್ದಾರೆ.
ವಿಶೇಷ ಕಾರ್ಯಾಚರಣೆ ವೇಳೆ, 294 ಜನರು ಮದ್ಯಪಾನ ಮಾಡಿ ಚಾಲನೆ ಮಾಡಿರುವುದು ಪತ್ತೆಯಾಗಿದೆ. ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಷ್ಟೇ ಅಲ್ಲದೆ, ಅವರ ಚಾಲನಾ ಪರವಾನಗಿ ರದ್ದತಿಗೆ ಮನವಿ ಮಾಡಲಾಗಿದೆ. ಪ್ರಕರಣಗಳ ಸಂಬಂಧ ಮುಂದಿನ ವಿಚಾರಗಳು ನ್ಯಾಯಾಲಯದಲ್ಲಿ ನಿರ್ಧಾರ ಆಗಲಿವೆ ಎಂದು ಅವರು ತಿಳಿಸಿದ್ದಾರೆ.
ಈಗ ಡಿಎಲ್ ಇಲ್ಲದೇ ಚಾಹನ ಚಲಾಯಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ. ಭಾನುವಾರ ಕೆಎಸ್ ಲೇಔಟ್ ಟ್ರಾಫಿಕ್ ಠಾಣೆಯಲ್ಲಿ ಒಂದು ಕೇಸ್ ದಾಖಲಾಗಿದೆ. ಯಾರೇ ಆಗಲಿ ಡಿಎಲ್ ಕೂಡ ಇಲ್ಲದೆ, ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಾರೋ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ. BNS 281 ಅಡಿ ಕೇಸ್ ದಾಖಲಿಸುವ ಕೆಲಸ ಆಗುತ್ತಿದೆ ಎಂದು ಅನುಚೇತ್ ಹೇಳಿದ್ದಾರೆ.