ಬೆಂಗಳೂರು:- ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಡ್ರಗ್ ಪೆಡ್ಲಿಂಗ್ನಲ್ಲಿ ತೊಡಗಿದ್ದ ವಿದೇಶಿ ಪ್ರಜೆ ಸೇರಿ ಮೂವರನ್ನು ಅರೆಸ್ಟ್ ಮಾಡಲಾಗಿದೆ. 50 ಲಕ್ಷ ಮೌಲ್ಯದ 180 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್, 58 ಗ್ರಾಂ 150 ಎಕ್ಸ್ಟಸಿ ಪಿಲ್ಸ್ ಗಳು ಮತ್ತು 15 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಮಾರತ್ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಒರಿಸ್ಸಾ ಮೂಲದ ಇಬ್ಬರು ಆರೋಪಿ ಗಳು ಸುಮಾರು 6 ತಿಂಗಳ ಹಿಂದೆ ಬೆಂಗಳೂರಿಗೆ ಬಂದು ಫುಟ್ಪಾತ್ ಮೇಲೆ ತಳ್ಳುವ ಗಾಡಿಯಲ್ಲಿ ತಿಂಡಿ-ತಿನಿಸುಗಳ ವ್ಯಾಪಾರ ಮಾಡಿಕೊಂಡಿದ್ದರು.
ಸುಲಭವಾಗಿ ಹಣ ಸಂಪಾದನೆ ಮಾಡುವ ಸಲುವಾಗಿ ಒರಿಸ್ಸಾದಿಂದ ಕಡಿಮೆ ಬೆಲೆಗೆ ಗಾಂಜಾವನ್ನು ಖರೀದಿ ಮಾಡಿ ಸ್ಥಳೀಯ ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದರು. ಇವರಿಂದ 15 ಕೆಜಿ ಗಾಂಜಾ ಮತ್ತಿತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.