ಬೆಂಗಳೂರು:- ನಗರದಲ್ಲಿ ಕುಡಿದು ವಾಹನ ಚಾಲನೆ ಮಾಡುತ್ತಿದ್ದ ಬೆಂಗಳೂರಿನ 118 ಶಾಲಾ ಬಸ್ ಚಾಲಕರ ವಿರುದ್ಧ ಕೇಸ್ ದಾಖಲಾಗಿದ್ದು, ಪರವಾನಗಿ ರದ್ದು ಮಾಡಲಾಗಿದೆ.
ಬೆಂಗಳೂರಿನ ಹೋಟೆಲ್ ನಲ್ಲಿ ಖ್ಯಾತ ನಿರ್ದೇಶಕನಿಂದ ಲೈಂಗಿಕ ದೌರ್ಜನ್ಯ ಆರೋಪ: ವಿಚಾರಣೆ ಸಾಧ್ಯತೆ
ಈ ಬಗ್ಗೆ ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದು, ಜನವರಿಯಲ್ಲಿ 16, ಫೆಬ್ರವರಿಯಲ್ಲಿ 7, ಜುಲೈನಲ್ಲಿ 23, ಆಗಸ್ಟ್ನಲ್ಲಿ 26, ಸೆಪ್ಟೆಂಬರ್ನಲ್ಲಿ 22, ನವೆಂಬರ್ನಲ್ಲಿ 24 ಪ್ರಕರಣ ದಾಖಲಾಗಿವೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಕಳೆದ 10 ತಿಂಗಳಲ್ಲಿ 20 ಸಾವಿರಕ್ಕಿಂತ ಹೆಚ್ಚು ಶಾಲಾ ವಾಹನಗಳನ್ನು ಪರಿಶೀಲನೆ ನಡೆಸಲಾಗಿದೆ. ಪರಿಶೀಲನೆ ವೇಳೆ ನಿಯಮ ಮೀರಿ ಬಸ್ನಲ್ಲಿ ಹೆಚ್ಚುವರಿ ಶಾಲಾ ಮಕ್ಕಳ ಸಾಗಾಟ ಮಾಡಿದ್ದು ಕೂಡ ತಿಳಿದು ಬಂದಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.
ಕಾಂಟ್ರ್ಯಾಕ್ಟ್ ಶಾಲಾ ವಾಹನಗಳ ಚಾಲಕರಿಂದಲೇ ಹೆಚ್ಚು ರೂಲ್ಸ್ ಬ್ರೇಕ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಪೊಲೀರು ಆಯಾ ಶಾಲಾ ಆಡಳಿತ ಮಂಡಳಿಗೆ ಪೊಲೀಸರು ನೋಟಿಸ್ ನೀಡುತ್ತಿದ್ದಾರೆ.
1 ವಾರದಲ್ಲಿ 794 ಕೇಸ್
ಬೆಂಗಳೂರು ನಗರ ಸಂಚಾರಿ ಪೊಲೀಸರು ನವೆಂಬರ್ 4 ರಿಂದ 10ರವರೆಗೆ ಮದ್ಯಪಾನಮಾಡಿ ವಾಹನ ಚಲಾಯಿಸುತ್ತಿದ್ದ ವಾಹನ ಚಾಲಕರು ಮತ್ತು ಸವಾರರುಗಳ ವಿರುದ್ಧ ಮತ್ತು ಅತಿವೇಗ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ನಗರದ 50 ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಕೈಗೊಂಡಿದ್ದಾರೆ.