ಬೆಂಗಳೂರು: ಕೆಇಎ (KEA) ಪರೀಕ್ಷೆ ಅಕ್ರಮದ ಕಿಂಗ್ಪಿನ್ ಆರ್.ಡಿ. ಪಾಟೀಲ್ನನ್ನು (RD Patil) ಆದಷ್ಟು ಬೇಗ ಪೊಲೀಸರು ಬಂಧಿಸಲಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ (G Parameshwar) ತಿಳಿಸಿದ್ದಾರೆ.
ಪೊಲೀಸರ ನಿರ್ಲಕ್ಷ್ಯದಿಂದ ಆರ್.ಡಿ. ಪಾಟೀಲ್ ಎಸ್ಕೇಪ್ ಆಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಆರ್ಡಿ ಪಾಟೀಲ್ ಎಸ್ಕೇಪ್ ಪ್ರಕರಣದಲ್ಲಿ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಆರ್ಡಿ ಪಾಟೀಲ್ ಬಂಧನ ಮಾಡಲು ಸೂಚನೆ ನೀಡಲಾಗಿದೆ. ಮಹಾರಾಷ್ಟ್ರದಲ್ಲಿ ತಪ್ಪಿಸಿಕೊಂಡು ಹೋಗಿರೋ ಬಗ್ಗೆ ಮಾಹಿತಿ ಇದೆ. ಪೊಲೀಸರು ಅವರನ್ನು ಅರೆಸ್ಟ್ ಮಾಡಿಕೊಂಡು ಬರುತ್ತಾರೆ. ಒಂದು ದಿನ ತಪ್ಪಿಸಿಕೊಂಡು ಹೋಗಬಹುದು. ಯಾರಾದರೂ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿ ತಪ್ಪಿಸಿಕೊಂಡು ಹೋಗಲು ಅವಕಾಶ ಮಾಡಿಕೊಟ್ಟಿದ್ದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಈಗಾಗಲೇ ಆರ್ಡಿ ಪಾಟೀಲ್ ಮೇಲೆ ಕೇಸ್ಗಳು ಇವೆ. ಪಿಎಸ್ಐ (PSI) ಕೇಸ್ನಲ್ಲೂ ಅವರ ಮೇಲೆ ಕೇಸ್ ಇದೆ. ಕೆಇಎ ಕೇಸ್ನಲ್ಲಿ ಇದ್ದಾರೆ ಅಂದರೆ ನಮಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಸಾಕ್ಷಿ ಆಧಾರಗಳು ಸಿಗುತ್ತವೆ. ಹೀಗಾಗಿ ನಾವು ಅವರನ್ನು ಅರೆಸ್ಟ್ ಮಾಡಿಕೊಂಡು ತರುತ್ತೇವೆ ಎಂದರು