ಭಾರತದ ವಿರುದ್ದ ಮೂರನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಸ್ಪಿನ್ನರ್ ದುನಿತ್ ವೆಲ್ಲಾಳಗೆ ಐದು ವಿಕೆಟ್ ಸಾಧನೆ ಮಾಡುವ ಮೂಲಕ ಒಡಿಐ ಕ್ರಿಕೆಟ್ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ. ಒಡೊಐ ಕ್ರಿಭಾರತದ ವಿರುದ್ದ ಹಲವು ಬಾರಿ 5 ವಿಕೆಟ್ ವಿಕೆಟ್ ಸಾಧನೆ ಮಾಡಿದ ಮೊದಲ ಸ್ಪಿನ್ನರ್ ಎಂಬ ನೂತನ ದಾಖಲೆಯನ್ನು ಬರೆದಿದ್ದಾರೆ.
Neeraj Chopra: ಒಲಂಪಿಕ್ʼನಲ್ಲಿ ಚಿನ್ನ ಗೆಲ್ಲಲು ಹಿನ್ನಡೆ ಆಗಲು ಕಾರಣವೇನೆಂದು ತಿಳಿಸಿದ ಚೋಪ್ರಾ ತಂದೆ!
ಮೂರನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ನೀಡಿದ್ದ 249 ರನ್ಗಳ ಗುರಿಯನ್ನು ಹಿಂಬಾಲಿಸಿದ ಭಾರತ ತಂಡ, ದುನಿತ್ ವೆಲ್ಲಾಳಗೆ (27ಕ್ಕೆ 5) ಸ್ಪಿನ್ನರ್ ಮೋಡಿಗೆ ನಲುಗಿ 138 ರನ್ಗಳಿಗೆ ಆಲ್ಔಟ್ ಆಯಿತು. ಆ ಮೂಲಕ ಶ್ರೀಲಂಕಾ ತಂಡ ಮೂರನೇ ಪಂದ್ಯದಲ್ಲಿ ಭರ್ಜರಿ ಗೆಲುವು ಪಡೆಯುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಲ್ಲಿ ಮುಡಿಗೇರಿಸಿಕೊಂಡಿತು.
ಏಕದಿನ ಕ್ರಿಕೆಟ್ನಲ್ಲಿ ಭಾರತದ ವಿರುದ್ದ ಹಲವು ಬಾರಿ 5 ವಿಕೆಟ್ ಸಾಧನೆ ಮಾಡಿದ ವಿಶ್ವದ ಮೊದಲ ಸ್ಪಿನ್ನರ್ ಎಂಬ ದಾಖಲೆಯನ್ನು ಬರೆದಿದ್ದಾರೆ. ಭಾರತದ ವಿರುದ್ಧ ಏಕದಿನ ಕ್ರಿಕೆಟ್ನಲ್ಲಿ ಐವರು ವೇಗದ ಬೌಲರ್ಗಳು ಈ ಸಾಧನೆಯನ್ನು ಮಾಡಿದ್ದಾರೆ.