ಡಂಕಿ (Dunki) ಸಿನಿಮಾ ಮೂಲಕ ಶಾರುಖ್ ಖಾನ್ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸುವುದಕ್ಕೆ ಸಜ್ಜಾಗಿ ನಿಂತಿದ್ದಾರೆ. ಈಗಾಗಲೇ ರಿಲೀಸ್ ಆಗಿರೋ ‘ಡಂಕಿ’ ಡ್ರಾಪ್ 1 ಝಲಕ್ ಕಿಕ್ ಕೊಟ್ಟಿದೆ. ಮೊದಲ ಹಾಡನ್ನು (Song) ಡ್ರಾಪ್ 2 ಎಂದು ಚಿತ್ರತಂಡ ರಿಲೀಸ್ ಮಾಡಲು ಹೊರಟಿದೆ.
‘ಡಂಕಿ’ ಸಿನಿಮಾದ ಮೊದಲ ಹಾಡು ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಇದೊಂದು ರೊಮ್ಯಾಂಟಿಕ್ ಸಾಂಗ್ ಆಗಿದ್ದು, ಶಾರುಖ್ ಖಾನ್ ಅಭಿಮಾನಿಗಳ ಕಣ್ಣು ಅರಳಿದೆ. ಕಳೆದ ಎರಡು ಸಿನಿಮಾಗಳಲ್ಲಿ ಶಾರುಖ್ ಖಾನ್ (Shah Rukh Khan) ಅನ್ನು ಹೆಚ್ಚಾಗಿ ಆಕ್ಷನ್ ಅವತಾರದಲ್ಲಿಯೇ ನೋಡಿದ್ದರು. ಹೀಗಾಗಿ ರೊಮ್ಯಾಂಟಿಕ್ ಲುಕ್ನಲ್ಲಿ ನೋಡುವುದಕ್ಕೆ ಕಾತುರರಾಗಿದ್ದಾರೆ.
‘ಡಂಕಿ’ ಸಿನಿಮಾದ ಈ ರೊಮ್ಯಾಂಟಿಕ್ ಸಾಂಗ್ ಇಂದು ರಿಲೀಸ್ ಆಗಲಿದೆ. ‘ಲುಪ್ ಪುಟ್ ಗಯಾ..’ ಅನ್ನೋ ಈ ಮೇಲೋಡಿ ಹಾಡನ್ನು ಕೇಳುವುದಕ್ಕೆ ಸಂಗೀತ ಆಸಕ್ತರು ಕಾದು ಕೂತಿದ್ದಾರೆ. ಬಾಲಿವುಡ್ನ ಜನಪ್ರಿಯರ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ ಈ ಸಿನಿಮಾಗೆ ಟ್ಯೂನ್ ಹಾಕಿದ್ದಾರೆ. ಶಾರುಖ್ ಖಾನ್ ಹಾಗೂ ತಾಪ್ಸಿ ಪನ್ನು (Taapsee) ರೊಮ್ಯಾಂಟಿಕ್ ಸಾಂಗ್ ಗೆ ಫ್ಯಾನ್ಸ್ ಎದುರು ನೋಡುತ್ತಿದ್ದಾರೆ.
ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್, ಮನು ಪಾತ್ರದಲ್ಲಿ ತಾಪ್ಸಿ, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.