ಗದಗ:- ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಚಾರದ ವೇಳೆಯೇ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಜರುಗಿದೆ.
ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ವಿರುಧ್ಧ ಧಿಕ್ಕಾರ ಕೂಗಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಕಾರ್ಯಕರ್ತರ ಮಧ್ಯೆ ನೂಕಾಟ ತಳ್ಳಾಟ ನಡೆದಿದ್ದು, ಶಾಸಕ ಚಂದ್ರು ಲಮಾಣಿ ಸ್ಟೇಜ್ ಹತ್ತಬಾರದು, ರೋಡ್ ಶೋಗೆ ಬರಬಾರದು ಎಂದು ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಸಿ ಸಿ ಪಾಟೀಲ್ ಮುಂದೆಯೇ ಭಿನ್ನಮತ ಪ್ರದರ್ಶನ ಮಾಡಿದ್ದಾರೆ.
ಎಂಎಲ್ ಎ ಡಾ. ಚಂದ್ರು ಲಮಾಣಿ ಗೋ ಬ್ಯಾಕ್ ಎಂಬ ಪೋಸ್ಟರ್ ಹಿಡಿದು ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ಬೊಮ್ಮಾಯಿ, ಸಿ ಸಿ ಪಾಟೀಲ್ ಮುಜುಗರಕ್ಕೀಡಾಗಿದ್ದಾರೆ. ಕಾರ್ಯಕರ್ತರನ್ನು ಸಮಾಧಾನಪಡಿಸಲು ಹರಸಾಹಸಪಟ್ಟಿದ್ದಾರೆ.
ಭಿನ್ನಮತ ಶಮನಕ್ಕೆ ಬೊಮ್ಮಾಯಿ ಮುಂದಾಗಿದ್ದು, ಕಾರ್ಯಕ್ರಮ ಮುಗಿದ ನಂತರ ಕಾರ್ಯಕರ್ತರೊಂದಿಗೆ ಪ್ರತ್ಯೇಕವಾಗಿ ಮಾತಾಡ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಭಿನ್ನಾಭಿಪ್ರಾಯ ಇದೆ ನಾನು ಹೆಳಿ ಬಗೆಹರಿಸಿದ್ದೇನೆ, ನಾಳೆ ಅಥವಾ ನಾಡಿದ್ದು ಬಂದು ರಾಜಿ ಮಾಡ್ತೇನೆ ಎಂದು ಮಾಜಿ ಸಚಿವ ಸಿ ಸಿ ಪಾಟೀಲ್ ಇದೆ ವೇಳೆ ಹೇಳಿದ್ದಾರೆ.