ಮೈಸೂರು: ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ (38) ಸಾವನ್ನಪ್ಪಿದ ಘಟನೆ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಭೀಮನಕಟ್ಟೆ ಬಳಿ ಹಾಕಲಾಗಿದ್ದ ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಅಶ್ವತ್ಥಾಮ ಆನೆ ಸಾವನ್ನಪ್ಪಿದೆ.
Robbery Case: ಸಿಲಿಕಾನ್ ಸಿಟಿಯಲ್ಲಿ ಬಿಡು ಬಿಟ್ಟ ತುಪ್ಪ ಕದಿಯೋ ಗ್ಯಾಂಗ್..! ಸೂಪರ್ ಮಾರ್ಕೆಟ್ʼಗಳೆ ಇವರ ಟಾರ್ಗೆಟ್
ಎರಡು ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಅಶ್ವತ್ಥಾಮ ಭಾಗಿಯಾಗಿತ್ತು. ಶಾಂತ ಹಾಗೂ ಗಾಂಭಿರ್ಯಕ್ಕೆ ಈ ಆನೆ ಹೆಸರುವಾಸಿಯಾಗಿತ್ತು. 2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಅಶ್ವತ್ಥಾಮ ಆನೆಯನ್ನು ಸೆರೆಹಿಡಿಯಲಾಗಿತ್ತು.