ವಿಜಯಪುರ : ಎ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿರುಗೇಟು ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ವಿರುದ್ಧ ಎಷ್ಟು ಕೆಟ್ಟದಾಗಿ ಮಾತನಾಡಿದ್ದೀರಿ, ನಿಮ್ಮ ಬಣ್ಣ ಬಯಲು ಮಾಡ್ತೀನಿ, ಇಲ್ಲವಾದರೆ ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಿ ಎಂದು ಪಂಥಾಹ್ವಾನ ನೀಡಿದ್ದಾರೆ.
ಸದಾನಂದಗೌಡ ಬಾಯಿ ಮುಚ್ಚಿಕೊಂಡು ಇರಬೇಕು. ಇಲ್ಲದೆ ಹೋದರೆ ಬಂಡವಾಳ ಬಯಲು ಮಾಡುತ್ತೇನೆ. ನಾನು ವಕ್ಫ್ ವಿರುದ್ಧ ಮಾತನಾಡಿದ್ದೇನೆ. ಸದಾನಂದಗೌಡ ಯಾಕೆ ಗಾಬರಿಯಾಗಬೇಕು..? ನೀವು ಗಾಬರಿಯಾಗಬೇಡಿ ಎಂದರು. ನಾಗರಹಾವು–ಎರೆಹುಳ ಎತ್ತನಿಂದೆತ್ತ ಸಂಬಂಧವಯ್ಯ ಸದಾನಂದ. ನೀನು ಮಾತನಾಡಿದ ಕೃತಿಗೂ ನಿನ್ನ ನಾಲಿಗೆಗೂ ಎತ್ತ ಸಂಬಂಧವಯ್ಯ ಸದಾನಂದ. ಇದು ನನ್ನ ಹೊಸ ವಚನ, ಇದು ನನ್ನ ಕೂಡಲಸಂಗಮ ಬಸವವಾಣಿ ಎಂದು ವಚನದ ಮೂಲಕ ಟಾಂಗ್ ನೀಡಿದ್ದಾರೆ. ಇದೇ ವೇಳೆ ದೆಹಲಿಯಿಂದ ಬುಲಾವ್ ಬಂದ ವಿಚಾರವಾಗಿಯು ಮಾತನಾಡಿ, ಸಿಟಿ ರವಿ ಕಾಲ್ ಮಾಡಿದ್ರು. ಇವತ್ತೇ ದೆಹಲಿಗೆ ಬನ್ನಿ ಎಂದಿದ್ದರು, ನಾನು ಆಗಲ್ಲ ಎಂದೆ ಎಂದರು.